ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣೆಯ ಪಿಎಸ್‌ಐ ಶಿವಶಂಕರ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಕರಣವೊಂದನ್ನು ಇತ್ಯರ್ಥಪಡಿಸುವ ನೆಪದಲ್ಲಿ 80 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್‌ಐ, ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಒಳಗಾದರು. ಈ ಬಗ್ಗೆ ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಿವಶಂಕರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆ ಪೊಲೀಸರು ಮತ್ತು ಸಾರ್ವಜನಿಕ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…