Latest

ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ – ಪೊಲೀಸ್ ಪೇದೆಯ ನಿಂದನೆಗೆ ಸಾರ್ವಜನಿಕನ ತಿರುಗೇಟು!”

ಚಿತ್ರದುರ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಾಹನ ಪಾರ್ಕಿಂಗ್ ವಿಚಾರವಾಗಿ ನಡೆದ ಘಟನೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸ್ ಪೇದೆ ಬಿದರಪ್ಪ ರವಿ ಹಾಗೂ ಸಾರ್ವಜನಿಕನೊಬ್ಬರ ನಡುವೆ ಶುರುವಾದ ಚರ್ಚೆ ಕೆಲವೇ ಕ್ಷಣಗಳಲ್ಲಿ ಉಗ್ರ ಸ್ವರೂಪ ಪಡೆಯಿತು.

ಸಾರ್ವಜನಿಕನು ತನ್ನ ವಾಹನವನ್ನು ನಿಲುಗಡೆ ಮಾಡುತ್ತಿದ್ದ ಸಂದರ್ಭ, ಪೊಲೀಸ್ ಪೇದೆಯು  ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಮಾತಿಗೆ ಮಾತು ಬೆಳೆದು ವಾಗ್ವಾದ ತೀವ್ರಗೊಂಡಿದೆ. ಈ ಸಂದರ್ಭ, ಪೇದೆ ತನ್ನ ಅಧಿಕಾರದ ದುರ್ಬಳಕೆ ಮಾಡಿಕೊಂಡು ವ್ಯಕ್ತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾನೆ ಎಂದು ದೃಶ್ಯಾವಳಿಗಳು ದೃಢಪಡಿಸಿವೆ.

ಅದಕ್ಕೆ ಪ್ರತಿಯಾಗಿ, ಸಾರ್ವಜನಿಕನು ತನ್ನ ಅಪಮಾನವನ್ನು ತಾಳದೆ ಪೇದೆಯ ವಿರುದ್ಧ ಗಂಭೀರವಾಗಿ ಪ್ರಶ್ನೆ ಎಬ್ಬಿಸಿದ್ದಾನೆ. ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರೂ ಈ ಘಟನೆಯನ್ನು ಗಮನಿಸಿ, ಪೇದೆಯ ವರ್ತನೆಯನ್ನು ಖಂಡಿಸಿದರು. ಸಾರ್ವಜನಿಕರ ಒತ್ತಾಯದ ಮೇರೆಗೆ, ಬಿದರಪ್ಪ ರವಿ ತನ್ನ ತಪ್ಪು ಅರಿತು, ಸಾರ್ವಜನಿಕರ ಮುಂದೆ ಕೈ ಮುಗಿದು ಕ್ಷಮೆ ಯಾಚಿಸಿದರು.

ಈ ಘಟನೆ ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸ್ ಸಿಬ್ಬಂದಿಯ ವರ್ತನೆ ಕುರಿತು ಉನ್ನತಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago