ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸುವಂತೆ ಆಗ್ರಹಿಸಿ ಸಿದ್ದಾಪುರದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಸಿದ್ದಾಪುರ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ, ಪೊಲೀಸ್ ಅಧಿಕಾರಿಗಳಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ನಿರಂತರ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿದರು. ಈ ಕುರಿತು ಈಗಾಗಲೇ ಲಿಖಿತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ತಮ್ಮ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ದೂರು ನೀಡಲಾಗಿತ್ತು. ತನಿಖೆ ವೇಳೆ ಸಂಬಂಧಿತ ವ್ಯಕ್ತಿಯ ಹೆಸರು ಪತ್ತೆಯಾಗಿದ್ದರೂ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ದೂರಿದರು. ಪ್ರಕರಣ ದಾಖಲಾಗಿದ್ದರೂ ಇದುವರೆಗೆ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿಲ್ಲ ಎಂದು ಆರೋಪಿಸಿದರು.
ಅಲ್ಲದೆ, ಡಿವೈಎಸ್ಪಿ ಹಾಗೂ ಪಿಐ ಹಲವು ಬಾರಿ ಠಾಣೆಗೆ ಕರೆಯಿಸಿ ಒತ್ತಡ ಹೇರಿದ್ದಾರೆ. ತಮ್ಮ ನಿವಾಸಕ್ಕೆ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿ ಕಿರುಕುಳ ನೀಡಲಾಗಿದೆ ಎಂದು ವಸಂತ ನಾಯ್ಕ ಆರೋಪಿಸಿದರು.
ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದ ಕೆಲವು ಕೊಲೆ, ಹಲ್ಲೆ, ಆತ್ಮಹತ್ಯೆ ಹಾಗೂ ಹಿಟ್ ಆ್ಯಂಡ್ ರನ್ ಪ್ರಕರಣಗಳ ತನಿಖೆಯಲ್ಲಿ ಲೋಪಗಳಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದವರ ಮೇಲೆಯೇ ಪ್ರಕರಣ ದಾಖಲಿಸುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು ಮತ್ತು ಸಾರ್ವಜನಿಕರು, ಸಂಬಂಧಿತ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆ ನಡೆಸಿ ಅಗತ್ಯ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…