Categories: Latest

ವಿದ್ಯಾರ್ಥಿಗಳಿಗೆ ಶಿಕ್ಷೆ ಪ್ರಕರಣ: ಚೈತನ್ಯ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರಿಗೆ ಹೈಕೋರ್ಟ್ ತಡೆ

ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬೆಂಗಳೂರಿನ ಯಲಹಂಕದ ಚೈತನ್ಯ ಟೆಕ್ನೋ ಶಾಲೆಯ ಪ್ರಾಂಶುಪಾಲೆ ಹಾಗೂ ಮೂವರು ಶಿಕ್ಷಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಸ್ಥಗಿತಗೊಳಿಸಿದೆ.

ಪ್ರಾಂಶುಪಾಲೆ ಮೀನಾಕ್ಷಿ ವಿನೋಧಿನಿ ಮತ್ತು ಶಿಕ್ಷಕರಾದ ರಾಯಚೋಟಿ ನರೇಶ್, ಕೆ. ಭರತ್ ಕುಮಾರ್ ಹಾಗೂ ಎಸ್. ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ ನ್ಯಾಯಪೀಠ, ಭವಿಷ್ಯದಲ್ಲಿ ಇತರೆ ವಿದ್ಯಾರ್ಥಿಗಳಿಂದ ದೂರುಗಳು ಬಂದರೆ ಈ ಆದೇಶವನ್ನು ರದ್ದುಗೊಳಿಸುವ ಸಾಧ್ಯತೆಯಿದೆ ಎಂದು ಮೌಖಿಕವಾಗಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳ ವಿಚಾರದಲ್ಲಿ ಪ್ರಾಂಶುಪಾಲೆ ಮತ್ತು ಪೋಷಕರ ನಡುವಿನ ಸಂಭಾಷಣೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳಿಂದ ಬಲವಂತವಾಗಿ ದೂರು ಪಡೆಯಲಾಗಿದೆ ಎಂದು ವಾದಿಸಿದರು. ಮಕ್ಕಳಿಗೆ ಯಾವುದೇ ದೈಹಿಕ ಶಿಕ್ಷೆ ನೀಡಲಾಗಿಲ್ಲ, ಕೇವಲ ಪೋಷಕರನ್ನು ಕರೆತರಲು ಸೂಚನೆ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಈ ಪ್ರಕರಣಕ್ಕೆ ಕಾರಣವಾದ ಘಟನೆ 2026ರ ಮಾರ್ಚ್ 13ರಂದು ನಡೆದಿದೆ. 7ರಿಂದ 10ನೇ ತರಗತಿಯ ಏಳು ವಿದ್ಯಾರ್ಥಿಗಳು ತಡವಾಗಿ ಶಾಲೆಗೆ ಬಂದ ಹಿನ್ನೆಲೆಯಲ್ಲಿ, ಅವರನ್ನು ತರಗತಿಗೆ ಸೇರಿಸದೇ ಶಾಲೆಯ ಆವರಣದಲ್ಲಿ ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

1 day ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

1 day ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago