Categories: CrimeLatest

ಟಿವಿ ನೋಡುವ ವಿಚಾರಕ್ಕೆ ಜಗಳ: ತಂದೆಯ ಕೈಯಲ್ಲೇ 17 ವರ್ಷದ ಮಗಳ ದಾರುಣ ಅಂತ್ಯ!

ಸತಾರಾ: ಟಿವಿ ನೋಡುವ ವಿಚಾರಕ್ಕೆ ಮನೆಯಲ್ಲಿ ಆರಂಭವಾದ ಜಗಳ ಕೊನೆಗೆ 17 ವರ್ಷದ ಬಾಲಕಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ನಡೆದಿದೆ. ಆರ್ಯ ಕದಂ (17) ಮೃತಪಟ್ಟ ಬಾಲಕಿ. ಆಕೆಯ ತಂದೆ ಪುರುಷೋತ್ತಮ್ ಕದಂ ಅವರೇ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಆರ್ಯ ಮನೆಯಲ್ಲಿ ಟಿವಿ ನೋಡುತ್ತಿದ್ದಾಗ ಆಕೆಯ ಕಿರಿಯ ಸಹೋದರ ಟಿವಿಯನ್ನು ಆಫ್ ಮಾಡಿದ್ದಾನೆ. ಇದರಿಂದ ಕೋಪಗೊಂಡ ಆರ್ಯ, ತನ್ನ ಸಹೋದರ ಮತ್ತು ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ. ಇದನ್ನು ಗಮನಿಸಿದ ತಂದೆ ಪುರುಷೋತ್ತಮ್, ಮಗಳನ್ನು ಪ್ರಶ್ನಿಸಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.

ಈ ವೇಳೆ ಆರ್ಯ ಕ್ರಿಕೆಟ್ ಬ್ಯಾಟ್‌ನಿಂದ ತಂದೆಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾಳೆ ಎಂದು ಹೇಳಲಾಗಿದೆ. ಇದರಿಂದ ಮತ್ತಷ್ಟು ಕೋಪಗೊಂಡ ತಂದೆ, ಆಕೆಯ ಕೈಯಲ್ಲಿದ್ದ ಬ್ಯಾಟ್ ಕಸಿದುಕೊಂಡು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಆರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪ

ಮಗಳ ಸಾವಿನ ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪೋಷಕರು ಪ್ರಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆರ್ಯಳ ರಕ್ತಸಿಕ್ತ ಬಟ್ಟೆಗಳನ್ನು ಬದಲಿಸಿ ತೊಳೆಯುವ ಯಂತ್ರದಲ್ಲಿ ತೊಳೆದಿದ್ದಾರೆ ಹಾಗೂ ಘಟನಾ ಸ್ಥಳವನ್ನು ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮಗಳು ಗೋಡೆಗೆ ತಲೆ ಡಿಕ್ಕಿ ಹೊಡೆದುಕೊಂಡು ಗಾಯಗೊಂಡು ಮೃತಪಟ್ಟಿದ್ದಾಳೆ ಎಂದು ಸುಳ್ಳು ಕಥೆ ಕಟ್ಟಿದ್ದರು ಎಂದು ವರದಿಯಾಗಿದೆ.

ಆದರೆ, ನೆರೆಹೊರೆಯವರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪೋಷಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ತಾಯಿ ಘಟನೆಯ ನೈಜ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದ್ದು, ಬಳಿಕ ತಂದೆ ಪುರುಷೋತ್ತಮ್ ಕೂಡ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರಿಂದ ತನಿಖೆ

ಘಟನೆಗೆ ಸಂಬಂಧಿಸಿದಂತೆ ತಂದೆಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಬಾಲಕಿಯ ಜೀವವನ್ನೇ ಬಲಿ ಪಡೆದಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಪಟಾಕಿ ಲೈಸೆನ್ಸ್‌ಗೆ ಲಂಚ: ತುಮಕೂರು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ತುಮಕೂರು: ಪಟಾಕಿ ಮಾರಾಟ ಹಾಗೂ ದಾಸ್ತಾನು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು, ಉಳಿಕೆ ಹಣ ಸ್ವೀಕರಿಸುತ್ತಿದ್ದ ತುಮಕೂರು…

14 hours ago

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿಗೆ ₹3 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಪೊಲೀಸ್ ಕಾನ್‌ಸ್ಟೆಬಲ್

ಕಲಬುರಗಿ: ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸಲು ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಸುಲೇಪೇಟ ಪೊಲೀಸ್ ಠಾಣೆಯ…

5 days ago

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್‌ಗೆ ಬ್ರೇಕ್: ಯಜಮಾನಿಯ ಹೆಸರಿನಲ್ಲೇ ಸಿಮ್ ಕಡ್ಡಾಯ

ಮದ್ದೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ಹಾಗೂ ನಕಲಿ ಫಲಾನುಭವಿಗಳನ್ನು ತಡೆಯುವ ಉದ್ದೇಶದಿಂದ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ…

5 days ago

ಕೆಎಸ್‌ಆರ್‌ಟಿಸಿ ಬಸ್ ತಡೆದು ಸಿಬ್ಬಂದಿ ಮೇಲೆ ಹಲ್ಲೆ: 24 ಗಂಟೆಯೊಳಗೆ ಮೂವರು ಆರೋಪಿಗಳ ಬಂಧನ

ಸಿದ್ದಾಪುರ: ಕೆಎಸ್‌ಆರ್‌ಟಿಸಿ ಬಸ್‌ಗೆ ದಾರಿ ಬಿಡುವ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಕರ್ತವ್ಯ ನಿರತ ಚಾಲಕ ಹಾಗೂ ಕಂಡಕ್ಟರ್…

5 days ago

“ಸೀಕ್ರೆಟ್ ಗರ್ಲ್‌ಫ್ರೆಂಡ್ ಆಗು, ಒಳ್ಳೆ ಅವಕಾಶ ಕೊಡ್ತೀನಿ” – 70ರ ಹರೆಯದ ನಿರ್ಮಾಪಕನ ಕರಾಳ ಮುಖ ಬಿಚ್ಚಿಟ್ಟ ನಟಿ ಯುಕ್ತಿ ಕಪೂರ್!

ಮುಂಬೈ: ಚಿತ್ರರಂಗದ ಗ್ಲಾಮರ್ ಜಗತ್ತಿನ ಹಿಂದೆ ಅಡಗಿರುವ ಕಹಿ ಸತ್ಯಗಳನ್ನು ಹಲವು ನಟಿಯರು ಬಹಿರಂಗಪಡಿಸುತ್ತಲೇ ಬಂದಿದ್ದಾರೆ. ಇದೀಗ ಕಿರುತೆರೆ ಹಾಗೂ…

1 week ago

ಗರ್ಭಿಣಿ ಪತ್ನಿಯನ್ನು ಬಿಟ್ಟು ಪ್ರೇಯಸಿ ಜೊತೆ ಎಸ್ಕೇಪ್! 7 ವರ್ಷಗಳ ಬಳಿಕ ಇನ್‌ಸ್ಟಾ ರೀಲ್ಸ್‌ನಿಂದ ಸಿಕ್ಕಿಬಿದ್ದ ಪತಿ!

ಹರ್ದೋಯಿ/ಲೂಧಿಯಾನ: ಗರ್ಭಿಣಿ ಪತ್ನಿಯನ್ನು ಬಿಟ್ಟು ಪ್ರೇಯಸಿ ಜೊತೆ ಓಡಿಹೋಗಿ, ಮತ್ತೊಂದು ಮದುವೆಯಾಗಿ ಹೊಸ ಸಂಸಾರ ಹೂಡಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ ಏಳು…

1 week ago