ಬಂಗಾರಪೇಟೆ |:ತಾಲ್ಲೂಕಿನ ಒಂದು ಗ್ರಾಮದಲ್ಲಿ ಬಾಲ್ಯ ವಿವಾಹ ನಡೆಯಲಿರುವುದರ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ದಾಳಿ ನಡೆಸಿ ಮದುವೆ ತಡೆಯುವಲ್ಲಿ ಯಶಸ್ವಿಯಾಗಿದ್ದು, ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಮೂಲಗಳ ಪ್ರಕಾರ, ಬಾಲಕಿಯ ಪೋಷಕರು ಮುಂದಿನ ತಿಂಗಳಲ್ಲಿ ಮದುವೆ ನೆರವೇರಿಸುವ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಲಭಿಸಿತ್ತು. ಕೂಡಲೇ ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮುನಿರಾಜು ನೇತೃತ್ವದ ತಂಡವನ್ನು ಸ್ಥಳಕ್ಕೆ ರವಾನಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡಿದರು. ತಕ್ಷಣ ಪೋಷಕರನ್ನು ಮತ್ತು ಸಂಬಂಧಿಕರನ್ನು ಸಮಜಾಯಿಷಿ ಮಾಡಿ, ಬಾಲ್ಯ ವಿವಾಹವು ಕಾನೂನಿಗೆ ವಿರುದ್ಧವಾದ ತೀವ್ರ ಅಪರಾಧವಾಗಿದೆ ಎಂಬುದನ್ನು ವಿವರಿಸಿದರು. ಜೊತೆಗೆ, ಇದರಿಂದಾಗಿ ಮಕ್ಕಳ ಭವಿಷ್ಯಕ್ಕೆ ಸಂಭವಿಸಬಹುದಾದ ಹಾನಿಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಾಚರಣೆ ಫಲಕಾರಿಯಾಗಿ ಮುಕ್ತಾಯವಾಗಿ, ಅಪ್ರಾಪ್ತ ಬಾಲಕಿಯನ್ನು ಪೋಷಣೆಗಾಗಿ ಕೆಜಿಎಫ್‌ನಲ್ಲಿರುವ ಸರ್ಕಾರಿ ಬಾಲ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಅಧಿಕಾರಿಗಳ ಈ ತ್ವರಿತ ಕ್ರಮ ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ
ೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…