Latest

ಚಾಮರಾಜನಗರ ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಿರುದ್ಧ ದಾಳಿ: ವ್ಯಾಪಾರಸ್ಥರಿಗೆ ತಲಾ ₹500ರಂತೆ ದಂಡ

ಚಾಮರಾಜನಗರ: ನಗರಸಭೆಯ ಆರೋಗ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳು ನಗರದಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್‌ ಬಳಸುತ್ತಿರುವ ಅಂಗಡಿಗಳ ವಿರುದ್ಧ ತೀವ್ರ ಕ್ರಮ ಕೈಗೊಂಡಿದ್ದಾರೆ. ನಗರದ ದೊಡ್ಡಂಗಡಿ ಬೀದಿ, ರಥ ಬೀದಿ, ಮಾರಿಗುಡಿ ಹಾಗೂ ಚಿಕ್ಕಂಗಡಿ ಬೀದಿಗಳಲ್ಲಿರುವ ದಿನಸಿ ಅಂಗಡಿ, ಬೇಕರಿ, ತಳ್ಳುಗಾಡಿ ವ್ಯಾಪಾರಸ್ಥರು, ಹೂವಿನ ಸ್ಟಾಲ್ ಹಾಗೂ ಇತರ ಮಳಿಗೆಗಳ ಮೇಲೆ ದಾಳಿ ನಡೆಸಲಾಯಿತು.

ಈ ವೇಳೆ ಅಧಿಕಾರಿಗಳು ಸುಮಾರು 15 ಕೆ.ಜಿ.ಷ್ಟು ಪ್ಲಾಸ್ಟಿಕ್ ಕವರ್ ಹಾಗೂ ಲೋಟಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಬಳಕೆ ಮಾಡಿದ 10 ಅಂಗಡಿಗಳ ಮಾಲೀಕರಿಗೆ ತಲಾ ₹500ರಂತೆ ದಂಡ ವಿಧಿಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ಸರಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.

ಇದೇ ವೇಳೆ ದಿನಸಿ ಅಂಗಡಿಗಳು, ಪಾಸ್ಟ್‌ಫುಡ್ ಸೆಂಟರ್‌ಗಳು, ವೈನ್‌ ಶಾಪ್‌ಗಳು ಸೇರಿದಂತೆ ಅನೇಕ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಏಕಬಳಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಿದರು.

ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿಯಾದ ಮಣಿಕಂಠ, ಚೇತನ್, ನಿತಿನ್, ಗೌತಮ್, ರವಿಕುಮಾರ್ ಹಾಗೂ ರಿತಿಕ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸಬೇಕು ಎಂಬ ಸಲಹೆಯನ್ನು ಅಧಿಕಾರಿಗಳು ಈ ಸಂದರ್ಭದಲ್ಲಿ ನೀಡಿದರು.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

2 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

3 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

3 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

3 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

23 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago