ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್ ಕೆ.ಎಂ. ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ 36 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.
ತಾಲೂಕಿನ ವಿವಿಧ ಭಾಗಗಳಲ್ಲಿ ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಂಯುಕ್ತ ಕಾರ್ಯಾಚರಣೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಹಾಗೂ ಟೀ ಅಂಗಡಿಗಳ ಮೇಲೆ ಪರಿಶೀಲನೆ ನಡೆಸಲಾಯಿತು. ಈ ವೇಳೆ ಗೃಹಬಳಕೆಗಾಗಿ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವುದು ಪತ್ತೆಯಾಗಿ ಅವನ್ನು ವಶಪಡಿಸಿಕೊಂಡಿದ್ದಾರೆ.
ಸಂಬಂಧಿತ ಅಂಗಡಿ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುವುದು ಕಾನೂನುಬಾಹಿರವಾಗಿದ್ದು, ಇದು ಸಾರ್ವಜನಿಕರ ಸುರಕ್ಷತೆಗೆ ಅಪಾಯಕಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ನಿಗಾವಹಿಸಲಾಗುವುದು ಎಂದು ತಹಸೀಲ್ದಾರ್ ಎಚ್ಚರಿಕೆ ನೀಡಿದ್ದಾರೆ. ನಾಗರಿಕ ಸರಬರಾಜು ಇಲಾಖೆ ಸಹ ಇಂತಹ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಈ ದಾಳಿಯಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕ ನವೀನ್, ಆಹಾರ ಇಲಾಖೆಯ ಶಿರಸ್ತಿದಾರ ಪುಷ್ಪಲತಾ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಅವಿನಾಶ್
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…