Latest

ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ: ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ 5 ಮಂದಿ ಬಂಧನ

ಭಟ್ಕಳ : ಮುರುಡೇಶ್ವರದ ಬಳಿ ಇರುವ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್‌ನಲ್ಲಿ ಅಂದರ್ ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದ ಐವರ ವಿರುದ್ಧ ಮುರುಡೇಶ್ವರ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆ ವಿವರದಲ್ಲಿಗೆ ಹೋಗುವುದಾದರೆ, ಬದ್ರಿಮನೆ ಮೂಲದ ಆಟೋ ಚಾಲಕ ಈಶ್ವರ ನಾಯ್ಕ ಅವರು ಮುಠ್ಠಳ್ಳಿ ಬಳಿಯ ಫ್ಯಾಮಿಲಿ ಫಾರಂ ಹೌಸ್‌ನ ರೂಂ ನಂ.105ನಲ್ಲಿ ಸದ್ಯಾ ವಾಸ್ತವ್ಯ ಮಾಡಿಕೊಂಡಿದ್ದರು. ಅವರು ತಮ್ಮ ನಾಲ್ವರು ಸ್ನೇಹಿತರನ್ನು ಅಲ್ಲಿ ಆಮಂತ್ರಿಸಿದ್ದರು. ಅವರೊಂದಿಗೆ ಮುಂಡಳ್ಳಿ ಗ್ರಾಮದ ವರದರಾಜ ನಾಯ್ಕ, ತಲಾಂದ ಗ್ರಾಮದ ಈಶ್ವರ ನಾಗಪ್ಪ ನಾಯ್ಕ (ಅತರೂ ಆಟೋ ಚಾಲಕರು), ಮಕ್ಕಿ ಗ್ರಾಮದ ಕೂಲಿ ಕಾರ್ಮಿಕ ಈಶ್ವರ ಮಾಸ್ತಪ್ಪ ನಾಯ್ಕ ಮತ್ತು ತಲಾಂದ ತಲಗೋಡು ಗ್ರಾಮದ ಸೆಂಟ್ರಿಂಗ್ ಕೆಲಸ ಮಾಡುವ ಲೋಕೇಶ ನಾಯ್ಕ ಸಹ ಭಾಗಿಯಾಗಿದ್ದರು.

ಈ ಗೂಡು ಗೂಪ್ತವಾಗಿ ಅಂದರ್ ಬಾಹರ್ ಆಟ ಆಡುತ್ತಿದ್ದ ವೇಳೆ ಜೂನ್ 20ರಂದು ಪಿಎಸ್‌ಐ ಹಣುಮಂತ ಬೀರಾದರ್ ನೇತೃತ್ವದ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ 13,200 ರೂ. ನಗದು, ಇಸ್ಪೀಟ್ ಎಲೆಗಳು ಹಾಗೂ ಜುಗಾರಿಗೆ ಬಳಸಿದ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಫ್ಯಾಮಿಲಿ ಫಾರಂ ಹೌಸ್ ಮಾಲಕರು ಜುಗಾರಿ ಆಟಕ್ಕೆ ಅವಕಾಶ ಕಲ್ಪಿಸಿದ್ದುದು ಬಹಿರಂಗವಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ತಯಾರಿ ನಡೆಯುತ್ತಿದೆ.

ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago