ಯಳಂದೂರು: ಮಾಂಬಳ್ಳಿ ಗ್ರಾಮದ ಕಿನಕಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರು ಮದ್ದೂರು ಗ್ರಾಮದ ಅಸ್ಲಂಪಾಷ ಮತ್ತು ಮುಳ್ಳೂರು ಗ್ರಾಮದ ಸುದೀಪ್ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರು ಪ್ಯಾಸೆಂಜರ್ ಆಟೋದಲ್ಲಿ 7 ಚೀಲಗಳಲ್ಲಿ 444 ಕಿಲೋ ಪಡಿತರ ಅಕ್ಕಿ (ಮೌಲ್ಯ 6670 ರೂ.) ಅನ್ನು ಮುಳ್ಳೂರು ಗ್ರಾಮದಲ್ಲಿ ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರೆಂದು ವರದಿಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಆಹಾರ ನಿರೀಕ್ಷಕ ಬಿಸಲಯ್ಯ ಹಾಗೂ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಕರಿಬಸಪ್ಪ, ಮುಖ್ಯಪೇದೆ ಪರಶಿವಮೂರ್ತಿ, ಕಿಶೋರ್, ಮತ್ತು ಪೇದೆಗಳಾದ ಶಿವಕುಮಾರ್ ಮತ್ತು ಬಸವರಾಜ್‌ಗುತ್ತಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಕ್ಕಿ ಮತ್ತು ಆಟೋವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…