Latest

ಗ್ರಾಮೀಣ ಭಾಗದ ಅನಧಿಕೃತ ಕ್ಲಿನಿಕ್‌ಗಳ ಮೇಲೆ ದಾಳಿ: ಎಂಟು ಕ್ಲಿನಿಕ್ ಗಳು ಲಾಕ್‌!

ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಕ್ಲಿನಿಕ್‌ಗಳ ಮೇಲೆ ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ) ಪ್ರಾಧಿಕಾರ ತಂಡದ ಅಧಿಕಾರಿಗಳು ದಾಳಿ ನಡೆಸಿ, ಕ್ಲಿನಿಕ್‌ಗಳನ್ನು ಬಂದ್‌ ಮಾಡುವ ಮೂಲಕ ನೋಟಿಸ್‌ ಜಾರಿ ಮಾಡಿದ್ದಾರೆ.

ಗುರುವಾರ ನಡೆದ ಈ ಕಾರ್ಯಾಚರಣೆಯಲ್ಲಿ ಮಳಗಿಯ ಚನ್ನಬಸವೇಶ್ವರ ಮೆಡಿಕಲ್ಸ್‌, ರೇಣುಕಾ ಮೆಡಿಕಲ್ಸ್‌, ಕೋಡಂಬಿಯ ಅಹ್ಮದಸಾಬ್‌ ಎಂಬುವರ ಕ್ಲಿನಿಕ್‌, ಪಾಳಾ ಗ್ರಾಮದ ಗುರು ಕ್ಲಿನಿಕ್‌, ಕಾತೂರ ಗ್ರಾಮದ ಧನ್ವಂತರಿ ಕ್ಲಿನಿಕ್‌, ಗಣೇಶಪುರದ ಗೋಪಾಲ ಎಂಬುವರ ಕ್ಲಿನಿಕ್‌, ಕಾವಲಕೊಪ್ಪ ಗ್ರಾಮದ ಧನ್ವಂತರಿ ಕ್ಲಿನಿಕ್‌ ಹಾಗೂ ಇನ್ನೊಂದು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ ಪರಿಶೀಲನೆಯ ಅಡಿಯಾಯಿತು.

ಅನಧಿಕೃತವಾಗಿ ಕಾರ್ಯನಿರ್ವಹಣೆ ಕಂಡು ಬಂದ ಹಿನ್ನೆಲೆ, ಎಲ್ಲ ಕ್ಲಿನಿಕ್‌ಗಳನ್ನು ತಕ್ಷಣವೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ‘ಹಿಂದಿನ ದಿನಗಳಲ್ಲಿ ಪಟ್ಟಣದಲ್ಲಿಯೂ ಇಂತಹ ದಾಳಿ ನಡೆಸಿ ಹಲವು ಅಕ್ರಮ ಕ್ಲಿನಿಕ್‌ಗಳನ್ನು ಬಂದ್‌ ಮಾಡಲಾಗಿತ್ತು. ಈಗ ಗ್ರಾಮೀಣ ಭಾಗದ ದಾಳಿ ಇನ್ನಷ್ಟು ತೀವ್ರಗೊಳ್ಳಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ತಿಳಿಸಿದ್ದಾರೆ.

ಇತ್ತ ಆರೋಗ್ಯ ಇಲಾಖೆ ಕ್ರಮಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ತಾಲ್ಲೂಕು ಘಟಕ ಸಹ ಬೆಂಬಲ ವ್ಯಕ್ತಪಡಿಸಿದೆ. ದಾಳಿಯಲ್ಲಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂಜೀವ ಗಲಗಲಿ, ಡಾ. ಭರತ ಡಿ.ಟಿ., ಪೊಲೀಸ್‌ ಸಿಬ್ಬಂದಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಇದೀಗ ಈ ಕ್ರಮದ ಬೆನ್ನಲ್ಲೇ, ಇನ್ನೂ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ. ಪರವಾನಗಿ ಇಲ್ಲದೆ ಕ್ಲಿನಿಕ್‌ಗಳ ನಿರ್ವಹಣೆಯ ವಿರುದ್ಧ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago