Latest

ಎರಡು ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ; ಬೆಟ್ಟಿಂಗ್ ಹಣ ಸಮೇತ 14 ಜನರ ಬಂಧನ.

ಶ್ರೀನಿವಾಸಪುರ: ಕೋಲಾರ (ಜಿ) ಶ್ರೀನಿವಾಸಪುರ ಪೊಲೀಸರಿಂದ ಎರಡು ಪ್ರತ್ಯೇಕ ಜೂಜಾಟದ ಅಡ್ಡೆಗಳ ಮೇಲೆ ದಾಳಿ, ಹಣಕ್ಕಾಗಿ ಜೂಜಾಟ ನಡೆಸುತ್ತಿದ್ದ 14 ಜನರ ಬಂಧನ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ನಿಖಿಲ್ ಬಿ. ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ಮುಳಬಾಗಿಲು ಉಪವಿಭಾಗದ ಪೋಲಿಸ್ ಉಪಾಧೀಕ್ಷಕರಾದ ನಂದಕುಮಾರ್ ಮುಂದಾಳತ್ವದಲ್ಲಿ ಮೆಹಬೂಬ್ ಬಾಷಾ ಗೊರವನಕೊಳ್ಳ ಪಿ.ಐ ಶ್ರೀನಿವಾಸಪುರ ಪೊಲೀಸ್ ಠಾಣೆ ರವರಿಗೆ ಭಾತ್ಮಿದಾರರಿಂದ ಎರಡು ಪ್ರತ್ಯೇಕ ಸ್ಥಳದಲ್ಲಿ ಬೆಟ್ಟಿಂಗ್,ಇಸ್ಪೀಟು ಜೂಜಾಟ ಧಂದೆ ನಡೆಯುತ್ತಿರುವ ಶ್ರೀನಿವಾಸಪುರ ತಾಲ್ಲೂಕು ಬಾಗಲಹಳ್ಳಿ ಕೆರೆಯ ಅಂಗಳದಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸ್ಥಳಕ್ಕೆ ಹೋಗಿ ನೋಡಲಾಗಿ 04 ಜನರ ಗುಂಪು ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದು ಇವರನ್ನು ಬಂಧಿಸಿ 04 ಜನರಿಂದ ಪಣಕ್ಕಿಟ್ಟಿದ್ದ 5000 /- ರೂಗಳನ್ನು ವಶಪಡಿಸಿಕೊಂಡು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮತ್ತೊಂದು ಕಡೆ ಕಡೆ ಶ್ರೀನಿವಾಸಪುರ ತಾಲ್ಲೂಕು ದಳಸನೂರು ಅರಣ್ಯದಲ್ಲಿ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದು, 10 ಜನರ ಗುಂಪು ಹಣವನ್ನು ಪಣಕ್ಕಿಟ್ಟು ಇಸ್ಪೀಟು ಜೂಜಾಟ ಆಡುತ್ತಿದ್ದು ಇವರನ್ನು ಬಂಧಿಸಿ ಅವರಿಂದ ಪಣಕ್ಕಿಟ್ಟಿದ್ದ 9000 /- ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಚರಣೆಯಲ್ಲಿ ಶ್ರೀನಿವಾಸಪುರ ಠಾಣಾ ಪಿ.ಎಸ್.ಐ ಜಯರಾಮ್. ಮತ್ತು ಸಿಬ್ಬಂದಿ ಪ್ರಕಾಶ್, ಮಂಜುನಾಥ, ರೆಡ್ಡೆಪ್ಪ, ರಮೇಶಬಾಬು, ಶಿವಾನಂದ್. ಸಂಪತಕುಮಾರ್. ಸಂತೋಷಕುಮಾರ್, ಪತ್ರಿಬಸಪ್ಪ ರವರರೊಂದಿಗೆ ಎರಡು ಕಡೆ ದಾಳಿ ನಡೆಸಿ ವೊಟ್ಟು 14 ಜನರ ಮೇಲೆ ಕಾನೂನು ಕ್ರಮ ಕೈಕೊಂಡಿದ್ದಾರೆ.
ಈ ಎರಡು ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ ಕಾರ್ಯಚರಣೆ ಮಾಡಿರುವ ಮೇಲ್ಕಂಡ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಐ.ಪಿ.ಎಸ್ ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago