Latest

ರೈಲ್ವೆ ಇಲಾಖೆ ಎಡವಟ್ಟು: ದೈನಂದಿನ ಪ್ರಯಾಣಿಕರಿಂದ ಕೋಚ್ ಗಳನ್ನು ಹೆಚ್ಚಿಸಲು ಆಗ್ರಹಿಸಿ ರೈಲು ತಡೆ.

ಬಂಗಾರಪೇಟೆ: ಬೆಂಗಳೂರು – ಮಾರಿಕೊಪ್ಪಮ್ (ಕೆಜಿಎಫ್) ಬಂಗಾರಪೇಟೆ ಮಾರ್ಗವಾಗಿ ದಿನನಿತ್ಯ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕಾಗಿ ಸುಮಾರು 20 ಸಾವಿರಕ್ಕಿಂತ ಹೆಚ್ಚು ಜನ ಬೆಂಗಳೂರಿಗೆ ದೈನಂದಿನ ಪ್ರಯಾಣ ಮಾಡುತ್ತಿದ್ದು ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ಬೆಳಿಗ್ಗೆ 8:30 ನಿಮಿಷಕ್ಕೆ ಸಂಚರಿಸುವ ಮೆಮೊ ರೈಲು ಈ ಹಿಂದೆ ಒಟ್ಟು 16 ಕೋಚ್‌ಗಳನ್ನು ಹೊಂದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೋಚ್ ಗಳ ಸಂಖ್ಯೆಯನ್ನು 16 ರರಿಂದ 12ಕ್ಕೆ ಇಳಿಸಲಾಗಿತ್ತು, ಇದರಿಂದ ದಿನನಿತ್ಯ ಪ್ರಯಾಣಿಕರಿಗೆ ಭಾರಿ ತೊಂದರೆ ಅನುಭವಿಸುತ್ತಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ದಿಡೀರನೆ ರೈಲ್ವೆ ಇಲಾಖೆ ಮತ್ತೊಮ್ಮೆ ಕೋಚ್‌ಗಳ ಸಂಖ್ಯೆಯನ್ನು ಕೇವಲ 8 ಕ್ಕೆ ಇಳಿಸಿದೆ, ಇದರಿಂದ ಪ್ರಯಾಣಿಕರಿಗೆ ಪ್ರಯಾಣ ಇನ್ನಷ್ಟು ಕಷ್ಟವಾಗಿದ್ದು ರೈಲಿನಲ್ಲಿ ನಿಂತುಕೊಳ್ಳಲು ಜಾಗವಿಲ್ಲದೆ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಉಂಟಾಗಿದ್ದು, ದೈನಂದಿನ ಪ್ರಯಾಣಿಕರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಉಂಟಾಗಿದೆ.

ರೈಲ್ವೆ ಇಲಾಖೆಯ ಈ ಅವೈಜ್ಞಾನಿಕ ನಿರ್ಧಾರದಿಂದ ಹತಾಶೆಗೊಂಡಿರುವ ಎಲ್ಲಾ ದೈನಂದಿನ ಪ್ರಯಾಣಿಕರು, ರೈಲ್ವೆ ಆಡಳಿತದ ನಿರ್ಲಕ್ಷತನದ ವಿರುದ್ಧ ಇಂದು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಮತ್ತೊಮ್ಮೆ ಹದಿನಾರು ಕೋಚ್ಗಳ ಬೋಗಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ದೈನಂದಿನ ಪ್ರಾಣಿಕರು ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಮಾರಿಕುಪ್ಪಂ – ಕೆ.ಎಸ್.ಆರ್ ಮೆಮೊ ರೈಲು ಸಂಖ್ಯೆ 66512 ರೈಲುನ್ನು ತಡೆದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವರ ವಿ. ಸೋಮಣ್ಣ ಹಾಗು ಡಿ. ಆರ್. ಎಂ ಬೆಂಗಳೂರು ರೈಲ್ವೆ ಇಲಾಖೆ ಆಧಿಕಾರಿ
ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಪ್ರತಿಭಟನಾಕಾರರನ್ನು ಮನವೊಲಿಸಲು ರೈಲ್ವೆ ಅಧಿಕಾರಿಗಳಿಂದ ಮತ್ತು ರೈಲ್ವೆ ಪೊಲೀಸರಿಂದ ಭಾರಿ ಹರಸಾಹಸ ಪಡಬೇಕಾಯಿತು.

ಯಾವುದೇ ಪ್ರಾಣ ಹಾನಿ ಸಂಭವಿಸುವ ಮುನ್ನ ರೈಲ್ವೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಹೆಚ್ಚು ಕೋಚ್ ಗಳನ್ನು ಅಳವಡಿಸುವ ಮೂಲಕ ಮುಂದೆ ಆಗುವ ಅನಾಹುತವನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ . ವರದಿ: ರೋಶನ್ ಜಮೀರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago