Latest

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ: ಎನ್‌ಕೌಂಟರ್‌ನಲ್ಲಿ ಬಲಿಯಾದ ಆರೋಪಿ ಮಣ್ಣಿಗೆ”

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಸಂಭವಿಸಿದ ಐದು ವರ್ಷದ ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬಿಟ್ಟಿತ್ತು. ಮನೆಯ ಮುಂದೆ ನಿರಭಯವಾಗಿ ಆಟವಾಡುತ್ತಿದ್ದ ಪುಟ್ಟಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕ್ರೂರವಾಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಘಟನೆ ಸುತ್ತಮುತ್ತಲವರಿಗೆ ಮಾತ್ರವಲ್ಲದೆ, ಮುಡಿವೊಂದು ಮಾನವೀಯತೆಯ ಮೇಲೆ ಚಿಂತನೆಯನ್ನು ಮೂಡಿಸಿತ್ತು.

ಈ ಹೃದಯವಿದ್ರಾವಕ ಘಟನೆಯ ಆರೋಪಿ ರಿತೇಶ್ ಕುಮಾರ್, ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ. ಸಾರ್ವಜನಿಕರ ಆಕ್ರೋಶ ಹಾಗೂ ಘಟನೆ ಸಂಬಂಧಿತ ವಿಚಾರಣೆಯ ನಡುವೆ ಆತನ ಶವವು ಅನಾಥವಾಗಿ ಉಳಿದಿತ್ತು. ಯಾವುದೇ ಕುಟುಂಬಸ್ಥರು ಶವವನ್ನು ಸ್ವೀಕರಿಸಲು ಮುಂದಾಗದ ಹಿನ್ನೆಲೆ, ಕೊನೆಗೂ ನ್ಯಾಯಾಲಯದ ಆದೇಶದಂತೆ ರಿತೇಶ್ ಶವದ ಅಂತ್ಯಕ್ರಿಯೆ ನಡೆಸಲಾಯಿತು.

ಮೃತ ದೇಹವನ್ನು ಸುಡುವ ಬದಲು ಮಣ್ಣು ಮಾಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅದಕ್ಕೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳನ್ನು ಪೂರೈಸಲಾಯಿತು. ಬಾಲಕಿಯ ಮೇಲೆ ಕ್ರೂರತೆ ಮೆರೆದ ಆಪಾದಿತನು ಕೊನೆಗೂ ಮಣ್ಣಿನಲ್ಲಿ ಲೀನನಾದಂತಾಗಿದೆ. ಈ ಮರಣದೊಂದಿಗೆ ಹುಬ್ಬಳ್ಳಿಯ ಆ ಘಟನೆಯ ಇನ್ನೊಂದು ಅಧ್ಯಾಯ ಮುಕ್ತಾಯಗೊಂಡಿದೆ.

ಈ ಘಟನೆ ರಾಜ್ಯಾದ್ಯಂತ ಆಕ್ರೋಶದ ಬಿಸಿಲನ್ನು ಬೀರಿದ್ದು, ಮಕ್ಕಳ ಸುರಕ್ಷತೆ ಕುರಿತು ಗಂಭೀರ ಚರ್ಚೆ ಮತ್ತು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂಬ ನಿಟ್ಟಿನಲ್ಲಿ ಸರ್ಕಾರ ಮತ್ತು ನಾಗರಿಕ ಸಮಾಜದ ಗಮನ ಸೆಳೆಯುತ್ತಿದೆ. ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

3 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

9 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago