ಚಿಕ್ಕಬಳ್ಳಾಪುರ, ಜೂನ್ 3 (ಕ್ರೈಂ ಡೇಲಿ): ಆರು ವರ್ಷದ ಪುಟ್ಟ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿಯಲ್ಲಿ ನಡೆದಿದೆ. ಮಸೀದಿಯ ಒಳ ಕೋಣೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಆರೋಪಿ ಮಹಪ್ಯೂಸ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶದವನು. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ವಲಸೆ ಬಂದ ಈತ, ಇಲ್ಲಿಯೇ ಬಟ್ಟೆಗಳ ಬೀದಿ ವ್ಯಾಪಾರ ಮಾಡುತ್ತಿದ್ದ. ಆತನ ಮಗನು ಚಿಕ್ಕಬಳ್ಳಾಪುರದ ಮತ್ತೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿದ್ದು, ಆತನಿಗೆ ನೀಡಿದ್ದ ಆಶ್ರಯ ಕೋಣೆಯನ್ನು ಮಹಪ್ಯೂಸ್ ದುರುಪಯೋಗಪಡಿಸಿಕೊಂಡಿದ್ದಾನೆ.
ಬಾಲಕಿಗೆ ಚಾಕೊಲೇಟ್ ಆಮಿಷವೊಡ್ಡಿ ಕೋಣೆಗೆ ಕರೆದೊಯ್ದ ಮಹಪ್ಯೂಸ್ ಅತ್ಯಾಚಾರ ಎಸಗಿದನೆಂದು ಪೀಡಿತೆಯ ತಾಯಿ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ತನಿಖೆ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆ ಬೆಳಕಿಗೆ ಬಂದ ನಂತರ ಮಸೀದಿಯ ಮೌಲ್ವಿ ಸುಹೇಬ್ ಸ್ಥಳೀಯರ ಆಕ್ರೋಶಕ್ಕೆ ಗುರಿಯಾದ್ರು. ತಂದೆಗೆ ಮಸೀದಿಯ ಕೊಠಡಿ ನೀಡಿದ್ದು ಎಂತಹ ನಿರ್ಲಕ್ಷ್ಯ ಎಂಬ ಪ್ರಶ್ನೆ ಎತ್ತಿ ಜನರು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಬಾಲಕಿಯ ತಾಯಿ ದುಷ್ಕರ್ಮಿಗೆ ಹಿಗ್ಗಾಮುಗ್ಗ ಥಳಿಸಿದ್ದೂ ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಗಂಭೀರ ಚಿಂತೆ ಹುಟ್ಟಿಸಿದೆ. ಕೆಲವೇ ದಿನಗಳ ಹಿಂದೆ ಬೆಳಗಾವಿಯಲ್ಲಿ ಅಪ್ರಾಪ್ತೆಯರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಗಳು ನಾಡಿನಾದ್ಯಂತ ಆಕ್ರೋಶ ಎಬ್ಬಿಸಿದ್ದವು. ಇದೀಗ ಚಿಕ್ಕಬಳ್ಳಾಪುರದಲ್ಲಿಯೂ ಇಂತಹ ಕೃತ್ಯ ನಡೆಯುತ್ತಿರುವುದು ಭದ್ರತೆ ವ್ಯವಸ್ಥೆಗಳ ಮೇಲೆ ಪ್ರಶ್ನೆ ಎತ್ತುತ್ತಿದೆ.
ಪೀಡಿತೆಯಿಗೆ ನ್ಯಾಯ ಒದಗಿಸಲು ತ್ವರಿತ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…