Latest

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ದಸರಾ ರಜೆಯಲ್ಲಿ ಗರ್ಭಪಾತ ಮಾಡಿಸಲು ಶಿಕ್ಷಕ ಹಾಕಿದ್ದ ಸ್ಕೆಚ್.

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ರೇಣಿಗುಂಟದಲ್ಲಿರುವ ಸರ್ಕಾರಿ ಬುಡಕಟ್ಟು ಕಲ್ಯಾಣ ಬಾಲಕಿಯರ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ.
ಆರೋಪಿಯು ಬಾಲಕಿ ವಾಸವಾಗಿದ್ದ ಹಾಸ್ಟೆಲ್‌ ನ ವಾರ್ಡನ್ ಆಗಿದ್ದ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆತ, ಸುಮಾರು ಒಂದು ತಿಂಗಳ ಹಿಂದೆ ಶಾಲೆಯಿಂದ ವರ್ಗಾವಣೆಯಾಗಿದ್ದ.
ಬಾಲಕಿ ತಾನು ಗರ್ಭಿಣಿ ಎಂಬ ಸುದ್ದಿಯನ್ನು ಆತನನ್ನು ತಲುಪಿಸಿದ್ದು, ದಸರಾ ರಜೆಯಲ್ಲಿ ಅಕ್ರಮವಾಗಿ ಗರ್ಭಪಾತ ಮಾಡಿಸಲು ಬಾಲಕಿಯನ್ನು ಒಂಗೋಲ್‌ ನಲ್ಲಿರುವ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದಿದ್ದ.
ಈ ನಡುವೆ ಬಾಲಕಿ ಹಬ್ಬಕ್ಕೆ ಮನೆಗೆ ಬಾರದೆ ಇದ್ದಿದ್ದರಿಂದ ಮನೆಯವರು ಹಾಸ್ಟೆಲ್‌ ಗೆ ಹೋಗಿ ವಿಚಾರಿಸಿದ್ದಾರೆ. ಅಲ್ಲಿ ವಿದ್ಯಾರ್ಥಿನಿ ಇಲ್ಲದಿರುವುದು ಗೊತ್ತಾಗಿ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿ ಶ್ರೀನಿವಾಸ ರಾವ್ ಜೊತೆಗಿದ್ದಳು ಎಂಬುದು ಗೊತ್ತಾಗಿದೆ.
ಪೊಲೀಸರಿಗೆ ದೂರು ಬಂದಿದೆ ಎಂದು ತಿಳಿದಾಗ ಆರೋಪಿ ಅಪ್ರಾಪ್ತೆ ಮಾಚರ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಬಾಲಕಿಯನ್ನು ರಕ್ಷಿಸಿ ಶಿಶುಪಾಲನಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಗರ್ಭಪಾತಕ್ಕೆ ಆಸ್ಪತ್ರೆಗೆ ಕರೆತಂದು ಅಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪೆದ್ದಲಪುಡಿ ಶ್ರೀನಿವಾಸ ರಾವ್ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದಾಗ ಈ ಅಪರಾಧ ಬೆಳಕಿಗೆ ಬಂದಿದೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

53 minutes ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

5 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

8 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

13 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago