ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಜನಮಾನಸವನ್ನು ನಡುಗಿಸುವಂತೆ ಭಯಾನಕ ಘಟನೆ ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ ಆಕ್ರೋಶದಿಂದ ಒಡಿಶಾದ ಮೂಲದ ವಲಸೆ ಕಾರ್ಮಿಕನೊಬ್ಬ, ಆಕೆಯ ಒಂದೂವರೆ ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಈ ದಾರುಣ ಘಟನೆ ಏಪ್ರಿಲ್ 6ರಂದು ನಡೆದಿದೆ. ಮಹಿಳೆ ತನ್ನ ಪತಿಯನ್ನು ಬಿಟ್ಟ ಬಳಿಕ ತನ್ನ ಮಕ್ಕಳೊಂದಿಗೆ ಆರೋಪಿಯೊಂದಿಗೆ ವಾಸವಾಗುತ್ತಿದ್ದಳು. ಸಂಬಂಧಕ್ಕೆ ಸಹಕರಿಸದ ಕಾರಣ ಆತ ತನ್ನ ಕ್ರೌರ್ಯವನ್ನು ಮಗುವಿನ ಮೇಲೆ ತೋರಿಸಿದ್ದಾನೆ. ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಈ ಅಮಾನವೀಯ ಕೃತ್ಯ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಬಳಿಕ ಮಗುವಿನ ಗೋಪ್ಯಾಂಗದಿಂದ ರಕ್ತಸ್ರಾವವಾಗುತ್ತಿದ್ದುದನ್ನು ಗಮನಿಸಿದ ತಾಯಿ ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಳು. ವೈದ್ಯಕೀಯ ತಪಾಸಣೆಯಲ್ಲಿ ಶಿಶುವಿಗೆ ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಆತನನ್ನು ಸೇಲಂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ದುಷ್ಕೃತ್ಯವು ವ್ಯಾಪಕ ಆಕ್ರೋಶವನ್ನು ಹುಟ್ಟಿಸಿತ್ತು. ಬಾಲಕಿಯರ ಸುರಕ್ಷತೆ ಮತ್ತು ನ್ಯಾಯಕ್ಕಾಗಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…