Categories: CrimeLatestSports

ಆರ್‌ಸಿಬಿ ಅಭಿಮಾನಿಯ ವಿಕೃತಿ: ಹೈದರಾಬಾದ್ ಬೆಂಬಲಿಸಿದ್ದ ಯುವತಿಗೆ ರೇಪ್ ಬೆದರಿಕೆ, ಸೈಬರ್ ಕ್ರೈಂನಲ್ಲಿ ಪ್ರಕರಣ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿ ಅಂತಿಮ ಹಂತ ತಲುಪಿದ್ದು, ನಾಳೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಈ ಬಾರಿಯ ಕ್ರಿಕೆಟ್ ಹಬ್ಬಕ್ಕೆ ತೆರೆ ಬೀಳಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯಲಿರುವ ಈ ಮಹಾ ಹಣಾಹಣಿಯತ್ತ ಇಡೀ ಕ್ರಿಕೆಟ್ ಜಗತ್ತು ಕಣ್ಣಿಟ್ಟಿದೆ.

ಆದರೆ ಫೈನಲ್ ಪಂದ್ಯದ ಸಂಭ್ರಮದ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಬೆಂಬಲಿಸಿದ್ದ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪದ ಮೇಲೆ ಆರ್‌ಸಿಬಿ ಅಭಿಮಾನಿಯೊಬ್ಬನ ವಿರುದ್ಧ ಸೈಬರ್ ಕ್ರೈಂ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ.

ಪ್ಲೇಆಫ್ ಹಂತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮೇಲೆ ಹಲವು ತಂಡಗಳ ಅಭಿಮಾನಿಗಳು ಗಮನಹರಿಸಿದ್ದರು. ಕಾರಣ, ಎಲಿಮಿನೇಟರ್ ಹಾಗೂ ಕ್ವಾಲಿಫಯರ್ ಹಂತಗಳಿಂದಲೇ ಫೈನಲ್ ಪ್ರವೇಶಿಸಿ ಟ್ರೋಫಿ ಗೆದ್ದ ಇತಿಹಾಸ ಆ ತಂಡಕ್ಕಿದೆ. ಅದರಲ್ಲೂ ಪ್ರಮುಖ ಪಂದ್ಯಗಳಲ್ಲಿ ಆರ್‌ಸಿಬಿಗೆ ಸೋಲುಣಿಸಿದ ಹಳೆಯ ದಾಖಲೆಗಳು ಬೆಂಗಳೂರು ಅಭಿಮಾನಿಗಳಲ್ಲಿ ವಿಶೇಷ ಆತಂಕ ಹುಟ್ಟಿಸಿದ್ದವು.

ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೈದರಾಬಾದ್ ತಂಡ ಸೋತು ಟೂರ್ನಿಯಿಂದ ಹೊರಬಿದ್ದ ಕೂಡಲೇ, ಹಲವು ಆರ್‌ಸಿಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಇದೇ ವೇಳೆ ಹೈದರಾಬಾದ್ ತಂಡವನ್ನು ಬೆಂಬಲಿಸಿದ್ದ ತೆಲುಗು ಯುವತಿಯೊಬ್ಬಳ ಹಳೆಯ ವಿಡಿಯೋ ಮತ್ತೆ ವೈರಲ್ ಆಗತೊಡಗಿತು.

ಟೂರ್ನಿಯ ಆರಂಭದಲ್ಲಿ ಹೈದರಾಬಾದ್ ತಂಡ ಕಳಪೆ ಪ್ರದರ್ಶನ ನೀಡುತ್ತಿದ್ದಾಗ, ಹಲವರು ತಂಡವನ್ನು ಟೀಕಿಸಿದ್ದರು. ಆದರೆ ನಂತರ ತಂಡ ಪುಟಿದೇಳಿ ಗೆಲುವಿನ ಹಾದಿ ಹಿಡಿದಾಗ, ತನ್ನ ನೆಚ್ಚಿನ ತಂಡದ ಮೇಲಿನ ವಿಶ್ವಾಸ ವ್ಯಕ್ತಪಡಿಸಿದ್ದ ಯುವತಿ ವಿಡಿಯೋವೊಂದರಲ್ಲಿ “ಈ ಬಾರಿ ಕಪ್ ನಮ್ಮದೇ” ಎಂದು ಹೇಳಿದ್ದಳು. ಆ ವಿಡಿಯೋವನ್ನು ಹೈದರಾಬಾದ್ ಅಭಿಮಾನಿಗಳು ವ್ಯಾಪಕವಾಗಿ ಹಂಚಿಕೊಂಡಿದ್ದರು.

ಆದರೆ ಹೈದರಾಬಾದ್ ತಂಡ ಟೂರ್ನಿಯಿಂದ ಹೊರಬಿದ್ದ ನಂತರ, ಅದೇ ವಿಡಿಯೋವನ್ನು ಕೆಲ ಆರ್‌ಸಿಬಿ ಅಭಿಮಾನಿಗಳು ಟ್ರೋಲ್ ಮಾಡಲು ಬಳಸಲು ಆರಂಭಿಸಿದರು. ಈ ವೇಳೆ ಸಂಜು ಎಂಬ ಹೆಸರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿ, ಯುವತಿಯ ವಿರುದ್ಧ ಅತ್ಯಾಚಾರದ ಬೆದರಿಕೆ ಇರುವ ರೀತಿಯಲ್ಲಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೇವಲ ಹೈದರಾಬಾದ್ ಅಭಿಮಾನಿಗಳು ಮಾತ್ರವಲ್ಲದೆ, ವಿವಿಧ ತಂಡಗಳ ಕ್ರಿಕೆಟ್ ಪ್ರೇಮಿಗಳು ಹಾಗೂ ಸಾರ್ವಜನಿಕರು ಕೂಡ ಈ ವರ್ತನೆಯನ್ನು ಖಂಡಿಸಿದ್ದಾರೆ. ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ನೆಟ್ಟಿಗರು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕ್ರೀಡೆ ಎಂದರೆ ಸ್ಪರ್ಧೆ ಮತ್ತು ಮನರಂಜನೆ. ಆದರೆ ಅಭಿಮಾನ ಎಂಬ ಹೆಸರಿನಲ್ಲಿ ಮಹಿಳೆಯರ ವಿರುದ್ಧ ಅಸಭ್ಯ ಭಾಷೆ ಬಳಕೆ ಮಾಡುವುದು ಅಥವಾ ಬೆದರಿಕೆ ಹಾಕುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ಇಂತಹ ಅತಿರೇಕದ ವರ್ತನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago