ಬೆಂಗಳೂರು, ಜೂನ್ 4: ಐಪಿಎಲ್ 2025ರಲ್ಲಿ ಇತಿಹಾಸ ರಚಿಸಿ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ ಸಲ್ಲಿಸಲಾಯಿತು. ತಂಡದ ಆಟಗಾರರು ಇಂದು ಬೆಳಗ್ಗೆ ಬೆಂಗಳೂರಿಗೆ ಬಂದಿಳಿದಾಗ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
18 ವರ್ಷಗಳ ನಿರೀಕ್ಷೆಯನ್ನು 18ನೇ ಆವೃತ್ತಿಯಲ್ಲಿ ನಿಜ ಮಾಡಿರುವ ನಮ್ಮ ಆರ್‌ಸಿಬಿ ತಂಡ ತವರಿಗೆ ಮರಳಿದೆ. ಇತಿಹಾಸ ನಿರ್ಮಿಸಿದ ಈ ವಿಜಯಪಥಕ್ಕೆ ಕರ್ನಾಟಕದ ಹೃದಯದಿಂದ ಪ್ರೀತಿ ಮತ್ತು ಗೌರವ ಸಲ್ಲಿಸುತ್ತೇವೆ,” ಎಂದು ಟ್ವೀಟ್ ಮಾಡಿದ್ದಾರೆ.
ಆರ್‌ಸಿಬಿ ತಂಡವನ್ನು ಗೌರವಿಸಲು ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಆಟಗಾರರನ್ನು ಸನ್ಮಾನಿಸಲಿದ್ದಾರೆ.
ಇದಾದ ನಂತರ, ಮಾಗ್ನೇಟಿಕ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವಿರಾರು ಆರ್‌ಸಿಬಿ ಅಭಿಮಾನಿಗಳ ಸಮ್ಮುಖದಲ್ಲಿ ವಿಜಯೋತ್ಸವ ನಡೆಯಲಿದೆ. ಈ ಸಂಭ್ರಮದಲ್ಲಿ ತಂಡದ ಆಟಗಾರರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
18 ವರ್ಷಗಳ ನಿರೀಕ್ಷೆಯ ನಂತರ ಆಟಗಾರರು ತಂದ ಈ ತ್ರೋಫಿ, ಬೃಹತ್ ವಿಜಯೋತ್ಸವಕ್ಕೆ ದಾರಿ ಮಾಡಿಕೊಡಿದ್ದು, ಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…