Latest

ಖಾಸಗಿ ಆಸ್ಪತ್ರೆಯಲ್ಲಿ ರೋಗಿಯಿಂದ ರಿಸೆಪ್ಷನಿಸ್ಟ್ ಮೇಲೆ ಹಲ್ಲೆ: ಸಿಸಿಟಿವಿಯಲ್ಲಿ ದೃಶ್ಯದ ದಾಖಲೆ

ಮುಂಬೈ, ಜುಲೈ 22: ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 26 ವರ್ಷದ ರಿಸೆಪ್ಷನಿಸ್ಟ್‌ ಸೋನಾಲಿ ಎಂಬವರು ರೋಗಿಯ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ವೈದ್ಯರ ಅಪಾಯಿಂಟ್‌ಮೆಂಟ್ ಇಲ್ಲದೆ ಒಳಗೆ ಪ್ರವೇಶಿಸಲು ನಿರಾಕರಿಸಿದುದಕ್ಕೆ ರೋಗಿಯೊಬ್ಬ ಅಸಹ್ಯವಾಗಿ ವರ್ತಿಸಿದ್ದು, ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.

ಘಟನೆಯ ವಿವರಗಳ ಪ್ರಕಾರ, ಆಸ್ಪತ್ರೆಯ ವೈದ್ಯರು ಆ ಸಮಯದಲ್ಲಿ ಮೀಟಿಂಗ್‌ನಲ್ಲಿದ್ದರು. ಇದರಿಂದಾಗಿ, ಯಾರನ್ನೂ ಒಳಗೆ ಬಿಡಬಾರದೆಂದು ವೈದ್ಯರು ನಿರ್ದಿಷ್ಟವಾಗಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋನಾಲಿ ಅವರು ಒಂದು ವೇಳೆ ಕಾಯಬೇಕೆಂದು ರೋಗಿಗೆ ತಿಳಿಸಿದರು.

ಆದರೆ ಕುಡಿತದ ಅಮಲಿನಲ್ಲಿದ್ದ ಆರೋಪಿತ ಗೋಕುಲ್ ಝಾ ಎಂಬ ವ್ಯಕ್ತಿ ಬಲವಂತವಾಗಿ ವೈದ್ಯರ ಕ್ಯಾಬಿನ್‌ ಒಳಗೆ ಹೋಗಲು ಪ್ರಯತ್ನಿಸಿದ. ಸೋನಾಲಿ ತಡೆದಾಗ ಆಕೆಯನ್ನು ತಳ್ಳಿಹಾಕಿ ಎಳೆದಾಡಿದ. ಘಟನೆಯು ಕೆಲ ಕ್ಷಣ ಗಲಾಟೆಗೆ ಕಾರಣವಾಯಿತಾದರೂ, ಸ್ಥಳದಲ್ಲಿದ್ದ ಕ್ಲಿನಿಕ್ ಸಿಬ್ಬಂದಿ ಹಾಗೂ ಇತರ ರೋಗಿಗಳ ಸಂಬಂಧಿಕರು ಮಧ್ಯಪ್ರವೇಶಿಸಿ ಸೋನಾಲಿಯ ರಕ್ಷಣೆ ಮಾಡಿದರು.

ಈ ಘಟನೆಯ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಮಹಿಳಾ ಸಿಬ್ಬಂದಿಯ ಸುರಕ್ಷತೆ ಕುರಿತು ಮರುಪರಿಶೀಲನೆ ನಡೆಸಲಾಗುತ್ತಿದೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

1 hour ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

14 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago