Categories: CrimeLatest

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ರೇವಾ ಜಿಲ್ಲೆಯ ಮೌಗಂಜ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 135ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಲ್ಸರ್ 220 ಬೈಕ್‌ನಲ್ಲಿ ಅತೀವೇಗದಲ್ಲಿ ಸಂಚರಿಸುತ್ತಿದ್ದ ಮೂವರು ಯುವಕರು, ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಸ್ಟಂಟ್ ಮಾಡುತ್ತಿದ್ದರು. ಒಬ್ಬ ಯುವಕ ಕೈಯಲ್ಲಿ ಗನ್ ಮಾದರಿಯ ಲೈಟರ್ ಹಿಡಿದು ಪ್ರದರ್ಶನ ಮಾಡುತ್ತಿದ್ದರೆ, ಉಳಿದಿಬ್ಬರು ಕೂಗಿ ಆನಂದಿಸುತ್ತಿದ್ದರು. ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಇದ್ದರೂ ಅವುಗಳನ್ನು ತಪ್ಪಿಸಿಕೊಂಡು ಬೈಕ್ ಚಲಾಯಿಸುತ್ತಿದ್ದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕರು ಮೊಬೈಲ್‌ನಲ್ಲಿ ರೀಲ್ಸ್ ರೆಕಾರ್ಡ್ ಮಾಡುತ್ತಿದ್ದ ವೇಳೆ ಗಮನ ಬೇರೆಡೆ ತಿರುಗಿದ್ದು, ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್ ಟ್ರಕ್‌ಗೆ ಬೈಕ್ ಭಾರೀ ವೇಗದಲ್ಲಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದ ನಂತರ ಅದೇ ಟ್ರಕ್‌ಗೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ವಾಹನ ಕೂಡ ಡಿಕ್ಕಿ ಹೊಡೆದು ಅದರಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ಮೃತಪಟ್ಟವರನ್ನು ಉಪಲಕ್ಷ್ಯ ಕೋಲ್ (17), ಅಮರೀಶ್ ಕೋಲ್ (22) ಮತ್ತು ಹೇಮರಾಜ್ ಕೋಲ್ (17) ಎಂದು ಗುರುತಿಸಲಾಗಿದೆ. ಇವರು ಲಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೇಲಾ ಗ್ರಾಮದ ನಿವಾಸಿಗಳಾಗಿದ್ದಾರೆ.

ಘಟನೆಯ ಬಳಿಕ ಟ್ರೇಲರ್ ಟ್ರಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago