ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಫ್ರಿಜ್‌ನಲ್ಲಿ ಇಟ್ಟಿರುವುದು ಆತಂಕ ಮೂಡಿಸಿದೆ.

ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ಎಂಬ ಆರೋಪಿ, ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದನು. ಇತ್ತೀಚೆಗೆ ರವೀಂದ್ರನ ಪತ್ನಿ ತವರು ಮನೆಯಲ್ಲಿ ಇರುವ ವೇಳೆ, ಮೌನಿಕಾ ಆತನ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾಳೆ ಎಂದು ಹೇಳಲಾಗಿದೆ.

ಈ ಹಿನ್ನೆಲೆ, ರವೀಂದ್ರ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಭೇಟಿ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಆಕ್ರೋಶಗೊಂಡ ರವೀಂದ್ರ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆಯ ನಂತರ ಶವವನ್ನು ತುಂಡುಮಾಡಿ, ಅದರ ಒಂದು ಭಾಗವನ್ನು ಫ್ರಿಜ್‌ನಲ್ಲಿ ಇಟ್ಟು, ಇನ್ನೊಂದು ಭಾಗವನ್ನು ಕಟ್ಟಿ ಮನೆಯೊಂದರ ಮೂಲೆಯಲ್ಲಿ ಬಚ್ಚಿಟ್ಟಿದ್ದಾನೆ. ನಂತರ ಆತ ಸ್ವತಃ ಪೊಲೀಸರಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related News

error: Content is protected !!