ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಫ್ರಿಜ್‌ನಲ್ಲಿ ಇಟ್ಟಿರುವುದು ಆತಂಕ ಮೂಡಿಸಿದೆ.
ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ಎಂಬ ಆರೋಪಿ, ಮೌನಿಕಾ (28) ಎಂಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ದನು. ಇತ್ತೀಚೆಗೆ ರವೀಂದ್ರನ ಪತ್ನಿ ತವರು ಮನೆಯಲ್ಲಿ ಇರುವ ವೇಳೆ, ಮೌನಿಕಾ ಆತನ ಮೇಲೆ ಹಣಕ್ಕಾಗಿ ಒತ್ತಡ ಹೇರುತ್ತಿದ್ದಾಳೆ ಎಂದು ಹೇಳಲಾಗಿದೆ.
ಈ ಹಿನ್ನೆಲೆ, ರವೀಂದ್ರ ಮೌನಿಕಾಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಭೇಟಿ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಆಕ್ರೋಶಗೊಂಡ ರವೀಂದ್ರ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆಯ ನಂತರ ಶವವನ್ನು ತುಂಡುಮಾಡಿ, ಅದರ ಒಂದು ಭಾಗವನ್ನು ಫ್ರಿಜ್‌ನಲ್ಲಿ ಇಟ್ಟು, ಇನ್ನೊಂದು ಭಾಗವನ್ನು ಕಟ್ಟಿ ಮನೆಯೊಂದರ ಮೂಲೆಯಲ್ಲಿ ಬಚ್ಚಿಟ್ಟಿದ್ದಾನೆ. ನಂತರ ಆತ ಸ್ವತಃ ಪೊಲೀಸರಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು ನಗರದ ಯಲಹಂಕ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 350 ಅಡುಗೆ ಅನಿಲ ಸಿಲಿಂಡರ್‌ಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ ಪ್ರಕರಣಕ್ಕೆ ಹೊಸ ತಿರುವು…
ಬೆಂಗಳೂರು ನಗರದಲ್ಲಿ ಪತ್ನಿಯ ಮಾನಸಿಕ ಹಾಗೂ ಲೈಂಗಿಕ ಕಿರುಕುಳದಿಂದ ಬೇಸತ್ತ ಪತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ.…
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಪಿಂಜಾರ್ ಹೆಗ್ಡಾಳ್ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಕೆಕೆಆರ್‌ಟಿಸಿ ಬಸ್ ಅಪಘಾತಕ್ಕೀಡಾದರೂ, ದೊಡ್ಡ…
ಗುಜರಾತ್‌ನ ಪಾಲನ್‌ಪುರದಲ್ಲಿ ಮಹಿಳೆಯೊಬ್ಬಳನ್ನು ಆಕೆಯೇ ವಿಶ್ವಾಸಿಸಿದ್ದ ಮಾಜಿ ಕೆಲಸದಾಕೆ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಶಾಂತಿಬೆನ್…
ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ರೌಡಿ ಶೀಟರ್ ಪಟ್ಟಿಯಲ್ಲಿರುವ ಮಹಿಳೆಗೆ ಅಶ್ಲೀಲ ಸಂದೇಶಗಳನ್ನು…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ…