Categories: CrimeLatest

ವಿವಾಹಿತೆಯೊಂದಿಗೆ ಸಂಬಂಧ: ಆಕೆಯ ಟಾರ್ಚರ್ ಗೆ ಬೇಸತ್ತ ಜಿಮ್ ಟ್ರೈನರ್ ಆತ್ಮಹತ್ಯೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ಸಾವಿಗೆ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ತಿಳಿಸಿದ್ದಾನೆ ಎಂಬುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ನೆಲಮಂಗಲ ತಾಲೂಕಿನ ವಾಜರಹಳ್ಳಿ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಅವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ವಿವಾಹಿತ ಮಹಿಳೆಯೊಂದಿಗೆ ಪರಿಚಯ ಬೆಳೆದಿತ್ತು. ಈ ಪರಿಚಯ ನಂತರ ಸಲುಗೆಗೆ ತಿರುಗಿ, ಇಬ್ಬರ ಮಧ್ಯೆ ಆತ್ಮೀಯ ಸಂಬಂಧ ರೂಪುಗೊಂಡಿತ್ತು ಎನ್ನಲಾಗಿದೆ.

ಈ ಸಂಬಂಧದ ವಿಚಾರವು ಒಂದು ವರ್ಷ ಹಿಂದೆಯೇ ಪೊಲೀಸ್ ಠಾಣೆ ಮಟ್ಟಿಗೆ ಹೋಗಿ ಬಳಿಕ ರಾಜಿ ಸಮಾಧಾನಗೊಂಡಿತ್ತು. ಆದರೂ ಕೂಡ, ಯೋಗಿತಾ ದಿಲೀಪ್‌ಗೆ ನಿರಂತರವಾಗಿ ಬ್ಲಾಕ್‌ಮೇಲ್ ಮಾಡುತ್ತಾ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ಮೃತ ದಿಲೀಪ್ ತಂದೆ ರಮೇಶ್ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅವರ ಪ್ರಕಾರ, ಯೋಗಿತಾ ತನ್ನ ಮಗನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು, ದಿಲೀಪ್ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆಸಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಳು. ಈ ಕಿರುಕುಳದಿಂದ ಬೇಸತ್ತು ದಿಲೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ದೂರಿದ್ದಾರೆ.

ಸಾವಿಗೆ ಮುನ್ನ ದಿಲೀಪ್ ಯೋಗಿತಾಳಿಗೆ ವಿಡಿಯೋ ಕಾಲ್ ಮಾಡಿದ್ದಾನೆ ಎನ್ನಲಾಗಿದ್ದು, ಈ ವಿಷಯ ತಿಳಿದ ಯೋಗಿತಾ ದಿಲೀಪ್ ಸಹೋದರಿಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಮನೆ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ದಿಲೀಪ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿಲೀಪ್ ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

40 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago