Latest

ಮಗಳು ಮತ್ತು ತಾಯಿ ಇಬ್ಬರ ಜೊತೆಯು ಸಂಬಂಧ ಹೊಂದಿದ್ದ ಯುವಕನನ್ನು ಕುಟುಂಬಸ್ಥರು ಹೊಡೆದು ಕೊಂದರು.

ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಚಾಲಕನಾಗಿದ್ದ ಅಯಾನ್ ಮಂಡಲ್ ತನ್ನ ಗೆಳತಿ ಹಾಗೂ ಆಕೆಯ ತಾಯಿಯೊಂದಿಗೂ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ವಿಜಯ ದಶಮಿ ನಿಮಿತ್ತ ಬುಧವಾರ ಸಂಜೆ ತನ್ನ ಗೆಳತಿಗೆ ಕರೆ ಮಾಡಿ ಸಂಪರ್ಕ ಸಾಧಿಸಲು ಯತ್ನಿಸಿದ್ದರು. ಆದರೆ, ಗೆಳತಿ ಪದೇ ಪದೆ ಕರೆಗಳನ್ನು ಕಡಿತಗೊಳಿಸಿದ್ದರು. ಇದರಿಂದ ಮಂಡಲ್​ ನಶೆಯಲ್ಲಿ ತನ್ನ ಗೆಳತಿ ಮನೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಮನೆಗೆ ತಲುಪಿದ ಬಳಿಕ ಗೆಳತಿಯ ತಾಯಿಯೊಂದಿಗೆ ಮಂಡಲ್​ ಜಗಳ ಮಾಡಿದ್ದಾರೆ. ಅಲ್ಲದೇ, ಆಕೆ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಆಗ ತಕ್ಷಣವೇ ಗೆಳತಿ ಹಾಗೂ ಆಕೆಯ ಸಹೋದರ ಮತ್ತು ತಂದೆ ಬಂದಿದ್ದಾರೆ. ಇದರಿಂದ ಈ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಂಡಲ್​ ತಲೆಗೆ ಸಹೋದರ ಭಾರವಾದ ವಸ್ತುವಿನಿಂದ ಹೊಡೆದಿದ್ದಾರೆ. ಪರಿಣಾಮ ಮಂಡಲ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ನಾಲ್ವರು ಸೇರಿಕೊಂಡು ಹೇಗಾದರೂ ಮಾಡಿ ಶವವನ್ನು ದೂರ ಎಸೆಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಆಕೆಯ ಸಹೋದರ ತನ್ನ ಇಬ್ಬರು ನಿಕಟ ಸಹಚರರನ್ನು ಸಂಪರ್ಕಿಸಿ, ಪಿಕ್ ಅಪ್ ವ್ಯಾನ್ ಬಾಡಿಗೆಗೆ ಪಡೆದು ಶವವನ್ನು ಮಗ್ರಾಹತ್‌ನ ಏಕಾಂತ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಇತ್ತ, ಗುರುವಾರ ಬೆಳಗ್ಗೆ ಮಂಡಲ್​ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದ್ದು, ದೂರಿನ ಬೆನ್ನಟ್ಟಿದಾಗ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಶುಕ್ರವಾರ ರಾತ್ರಿ ಅಯಾನ್ ಮಂಡಲ್​ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿ ವಿವರಿಸಿದ್ದಾರೆ.

ಇದೇ ವೇಳೆ, ಪ್ರಕರಣವು ಪ್ರಮುಖವಾದ ತಿರುವು ಬಂದಿದೆ. ಅಯಾನ್ ಮನೆಗೆ ಬಂದಿದ್ದ ಗೆಳತಿಯು ತಾನು ಗರ್ಭಿಣಿ ಹಾಗೂ ತನ್ನ ಹೊಟ್ಟೆಯಲ್ಲಿ ಮಗುವಿದೆ ಅಂತಾ ಹೇಳಿಕೊಂಡಿರುವುದಾಗಿ ಅಯಾನ್​ನ ತಾಯಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲು ಮುಂದಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

7 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

10 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

15 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago