Latest

ಹಗಲಿನಲ್ಲಿ ನೊಣ, ರಾತ್ರೀ ಸೊಳ್ಳೆ ಕಾಟದಿಂದ ಬೇಸತ್ತ ನವಲಗುಂದ ನಿವಾಸಿಗಳು.

ಧಾರವಾಡ ಜಿಲ್ಲೆಯ ನವಲಗುಂದ ವ್ಯಾಪ್ತಿಯ ಬಸವೇಶ್ವರನಗರದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿಯ ಉಪಯೋಗಕ್ಕೆ ತರಿಸಿಕೊಂಡಿದ್ದ ಮಣ್ಣು ರಸ್ತೆಯ ಪಕ್ಕದ ಚರಂಡಿಯಲ್ಲಿ ಬಿದ್ದು ಸ್ಥಳೀಯರ ನಿದ್ದೆ ಕೆಡಿಸುವಂತಾಗಿದೆ ಇದನ್ನು ಸ್ಥಳೀಯ ಗುತ್ತಿಗೆದಾರರು ಹಾಗೂ ನವಲಗುಂದ ಪುರಸಭೆ ಅಧಿಕಾರಿಗಳು ಕಂಡರೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ . ಕಳೆದ 8-10 ದಿನಗಳಿಂದ ಬಸವೇಶ್ವರ ನಗರದಲ್ಲಿ ಭರದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇತ್ತೀಚೆಗೆ ಯಾಕೋ ವಿಳಂಬವಾಗಿಬಿಟ್ಟಿದೆ ಮತ್ತು ಈ ಕಾಮಗಾರಿಗೆ ತರಿಸಿಕೊಂದಿದ್ದ ಗರಸು ಮಣ್ಣು ರಸ್ತೆ ಪಕ್ಕದಲ್ಲಿ ಚರಂಡಿಯಲ್ಲಿ ಬಿದ್ದಿದ್ದು ಸ್ಥಳೀಯ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ಚರಂಡಿಯಲ್ಲಿ ಬಿದ್ದಿರುವ ಮಣ್ಣನ್ನು ತೆಗೆಯಿರಿ ಕ್ರಿಮಿ ಕೀಟಗಳು ಉತ್ಪತ್ತಿಯಾಗಿ ಸಮಸ್ಯೆ ಆಗುತ್ತದೆ ಎಂದೂ ಕೇಳಿಕೊಂಡರು ಅಧಿಕಾರಿಗಳ ಇತ್ತ ಗಮನ ಹರಿಸುತ್ತಿಲ್ಲ. ಇನ್ನೂ ಮಣ್ಣು ಬಿದ್ದಿರುವ ಈ ಚರಂಡಿಯಲ್ಲಿ ಚರಂಡಿಯ ಮೂಲಕ ಹರಿದುಕೊಂಡು ಬಂದ ಕೊಳಕು ನೀರು ಒಂದೇ ಕಡೆ ಸಂಗ್ರಹವಾಗಿ ಬೆಳಿಗ್ಗೆ ಸಮಯದಲ್ಲಿ ನೊಣಗಳ ಕಾಟ ರಾತ್ರಿ ಸಮಯದಲ್ಲಿ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಕಾಟದಿಂದ ಸ್ಥಳೀಯ ನಿವಾಸಿಗಳು ಬೇಸತ್ತು ಹಿಡಿ ಶಾಪ ಹಾಕುವಂತಾಗಿದೆ ಅಷ್ಟೇ ಅಲ್ಲದೇ ತಕ್ಷಣ ಈ ವಿಚಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಮಣ್ಣು ತಗೆದು ಸ್ಥಳೀಯರಿಗೆ ಸರಿಯಾದ ರಸ್ತೆ ನಿರ್ಮಿಸಿಕೊಡಬೇಕು ಇಲ್ಲವಾದರೆ ಈ ಕಾಮಗಾರಿಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವರದಿ : ಶಿವು

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago