ಭಟ್ಕಳ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ವಿಶಿಷ್ಟ ಗುರುತಿಸಿಕೊಂಡಿರುವ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ್ ಅವರಿಗೆ 2025–26ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ಲಭಿಸಿದೆ.

ದೀಪಕ್ ನಾಯ್ಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿದ್ದು, ಪೊಲೀಸ್ ಇಲಾಖೆಯ ಗೌರವ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅವರು ಸಲ್ಲಿಸಿರುವ ಸೇವೆ ಪ್ರಶಂಸನೀಯವಾಗಿದೆ.

ಹಲವು ಪ್ರಮುಖ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಅವರು, ಆರೋಪಿಗಳ ಪತ್ತೆ, ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿ ಹಾಗೂ ವಿವಿಧ ಪೊಲೀಸ್ ಕಾರ್ಯಾಚರಣೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ವೃತ್ತಿಪರತೆ, ಸೇವಾ ಮನೋಭಾವ ಮತ್ತು ಕರ್ತವ್ಯಪ್ರಜ್ಞೆ ಇಲಾಖೆಯ ಹಿರಿಯ ಅಧಿಕಾರಿಗಳ ಮೆಚ್ಚುಗೆಗೂ ಪಾತ್ರವಾಗಿದೆ.

ಪೊಲೀಸ್ ಇಲಾಖೆಗೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು 2025–26ನೇ ಸಾಲಿನ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕ ನೀಡಿ ಅವರನ್ನು ಗೌರವಿಸಿದೆ.

ದೀಪಕ್ ನಾಯ್ಕ್ ಅವರ ಈ ಸಾಧನೆಗೆ ಪೊಲೀಸ್ ಇಲಾಖೆ, ಸಹೋದ್ಯೋಗಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Related News

error: Content is protected !!