ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪೊಲೀಸರು ಹೊಣೆ ಎಂಬ ಸರ್ಕಾರಿ ನಿರ್ಧಾರದ ವಿರುದ್ಧ ಪೊಲೀಸ್ ಇಲಾಖೆ ಒಳಗೆ ಅಸಮಾಧಾನ ಭುಗಿಲೆದ್ದುಬಿಟ್ಟಿದೆ. ಈ ಕ್ರಮದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದ್ದು, ಇದರ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನರಸಿಂಹರಾಜು ಅನನ್ಯ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ.
ರಾಜಭವನದ ಎದುರು ಅಂಬೇಡ್ಕರ್ ಭಾವಚಿತ್ರವೊಂದನ್ನು ಹಿಡಿದು ನಿಂತ ಅವರು, “ನಮ್ಮ ಕಮಿಷನರ್ ವಿರುದ್ಧದ ಕ್ರಮವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು,” ಎಂಬ ಘೋಷಣೆ ಕೂಗಿದರು. ಆರ್‌ಸಿಬಿ ತಂಡದ ಸನ್ಮಾನ ಕಾರ್ಯಕ್ರಮವನ್ನು ತುರ್ತಾಗಿ ಆಯೋಜಿಸಲು ಸರ್ಕಾರವೇ ಒತ್ತಡ ಹೇರಿದ್ದರೂ, ಅದೇ ದಿನ ನಡೆದ ಅವ್ಯವಸ್ಥೆಗೂ ಹೊಣೆಗಾರರನ್ನಾಗಿ ಪೊಲೀಸರನ್ನೇ ಮಾಡಲಾಗಿದೆ ಎಂಬ ಆರೋಪ ಅವರದು.
ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಾವೇ ವಿಮಾನ ನಿಲ್ದಾಣಕ್ಕೆ ತೆರಳಿ ಆಟಗಾರರನ್ನು ಬರಮಾಡಿಕೊಂಡಿದ್ದರು. ಈ ಸಮಯದಲ್ಲಿ ಪೊಲೀಸ್ ಇಲಾಖೆಗೆ ಸಾಧ್ಯವಾದಷ್ಟು ಸುರಕ್ಷತೆ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಜನಸಂದಣಿಯಿಂದಾಗಿ ನಿಯಂತ್ರಣ ತಪ್ಪಿದ ಘಟನೆ ದುರಂತವನ್ನಾಗಿ ಮಾರ್ಪಟ್ಟಿತು.
ಪ್ರತಿಭಟನೆ ನಡೆಸಿದ ನಂತರ ವಿಧಾನಸೌಧ ಪೊಲೀಸರು ನರಸಿಂಹರಾಜು ಅವರನ್ನು ವಶಕ್ಕೆ ತೆಗೆದುಕೊಂಡು, ಮತ್ತೆ ಈ ರೀತಿಯ ವರ್ತನೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯ ಜೊತೆಗೆ ತಪ್ಪೊಪ್ಪಿಗೆ ಪತ್ರ ಬರೆಸಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಈ ಘಟನೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡುವಿನ ನಂಬಿಕೆಯೊಳಗಿನ ಬಿರುಕು ತೋರಿಸುತ್ತಿದ್ದು, ಇದು ಮುಂದೆ ಏನೆಲ್ಲಾ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತದೋ ಅನ್ನುವ ಪ್ರಶ್ನೆ ಉದ್ಭವಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…