Categories: Latest

ಚಿನ್ನಸ್ವಾಮಿ ದುರಂತದ ಹೊಣೆ: ಕಮಿಷನರ್ ಅಮಾನತು ವಿರೋಧಿಸಿ ಕಾನ್ಸ್‌ಟೇಬಲ್ ನರಸಿಂಹರಾಜು ರಾಜಭವನದ ಮುಂದೆ ಟ ಪ್ರತಿಭಟನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪೊಲೀಸರು ಹೊಣೆ ಎಂಬ ಸರ್ಕಾರಿ ನಿರ್ಧಾರದ ವಿರುದ್ಧ ಪೊಲೀಸ್ ಇಲಾಖೆ ಒಳಗೆ ಅಸಮಾಧಾನ ಭುಗಿಲೆದ್ದುಬಿಟ್ಟಿದೆ. ಈ ಕ್ರಮದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದ್ದು, ಇದರ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನರಸಿಂಹರಾಜು ಅನನ್ಯ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ರಾಜಭವನದ ಎದುರು ಅಂಬೇಡ್ಕರ್ ಭಾವಚಿತ್ರವೊಂದನ್ನು ಹಿಡಿದು ನಿಂತ ಅವರು, “ನಮ್ಮ ಕಮಿಷನರ್ ವಿರುದ್ಧದ ಕ್ರಮವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು,” ಎಂಬ ಘೋಷಣೆ ಕೂಗಿದರು. ಆರ್‌ಸಿಬಿ ತಂಡದ ಸನ್ಮಾನ ಕಾರ್ಯಕ್ರಮವನ್ನು ತುರ್ತಾಗಿ ಆಯೋಜಿಸಲು ಸರ್ಕಾರವೇ ಒತ್ತಡ ಹೇರಿದ್ದರೂ, ಅದೇ ದಿನ ನಡೆದ ಅವ್ಯವಸ್ಥೆಗೂ ಹೊಣೆಗಾರರನ್ನಾಗಿ ಪೊಲೀಸರನ್ನೇ ಮಾಡಲಾಗಿದೆ ಎಂಬ ಆರೋಪ ಅವರದು.

ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಾವೇ ವಿಮಾನ ನಿಲ್ದಾಣಕ್ಕೆ ತೆರಳಿ ಆಟಗಾರರನ್ನು ಬರಮಾಡಿಕೊಂಡಿದ್ದರು. ಈ ಸಮಯದಲ್ಲಿ ಪೊಲೀಸ್ ಇಲಾಖೆಗೆ ಸಾಧ್ಯವಾದಷ್ಟು ಸುರಕ್ಷತೆ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಜನಸಂದಣಿಯಿಂದಾಗಿ ನಿಯಂತ್ರಣ ತಪ್ಪಿದ ಘಟನೆ ದುರಂತವನ್ನಾಗಿ ಮಾರ್ಪಟ್ಟಿತು.

ಪ್ರತಿಭಟನೆ ನಡೆಸಿದ ನಂತರ ವಿಧಾನಸೌಧ ಪೊಲೀಸರು ನರಸಿಂಹರಾಜು ಅವರನ್ನು ವಶಕ್ಕೆ ತೆಗೆದುಕೊಂಡು, ಮತ್ತೆ ಈ ರೀತಿಯ ವರ್ತನೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯ ಜೊತೆಗೆ ತಪ್ಪೊಪ್ಪಿಗೆ ಪತ್ರ ಬರೆಸಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಈ ಘಟನೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡುವಿನ ನಂಬಿಕೆಯೊಳಗಿನ ಬಿರುಕು ತೋರಿಸುತ್ತಿದ್ದು, ಇದು ಮುಂದೆ ಏನೆಲ್ಲಾ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತದೋ ಅನ್ನುವ ಪ್ರಶ್ನೆ ಉದ್ಭವಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

11 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

23 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 day ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago