ಮೈಸೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಯುವತಿಯ ಬಲೆಗೆ ಬಿದ್ದ 74 ವರ್ಷದ ನಿವೃತ್ತ ಅಧಿಕಾರಿಯೊಬ್ಬರು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ 9.45 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುವೆಂಪುನಗರ ನಿವಾಸಿಯಾಗಿರುವ ನಿವೃತ್ತ ಅಧಿಕಾರಿಗೆ ಫೇಸ್‌ಬುಕ್ ಮೂಲಕ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಮೊಬೈಲ್ ಸಂದೇಶಗಳ ಮೂಲಕ ಸ್ನೇಹ ಬೆಳೆದಿದ್ದು, ಆಪ್ತತೆ ಹೆಚ್ಚಿದ ಹಿನ್ನೆಲೆಯಲ್ಲಿ ವಿಡಿಯೋ ಚಾಟ್ ನಡೆಸಿದ್ದಾರೆ.
ಈ ವೇಳೆ ಯುವತಿಯ ಪ್ರೇರಣೆಯಿಂದ ನಿವೃತ್ತ ಅಧಿಕಾರಿ ನಗ್ನವಾಗಿ ವಿಡಿಯೋ ಚಾಟ್ ಮಾಡಿದ್ದು, ಅದನ್ನು ಯುವತಿ ರಹಸ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ನಂತರ ಆ ವಿಡಿಯೋವನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ಹಣಕ್ಕಾಗಿ ಒತ್ತಾಯಿಸಿದ್ದಾಳೆ.
ಮಾನಹಾನಿಯ ಭಯದಿಂದ ನಿವೃತ್ತ ಅಧಿಕಾರಿ ಹಂತ ಹಂತವಾಗಿ ಯುವತಿ ನೀಡಿದ ಬ್ಯಾಂಕ್ ಖಾತೆಗೆ ಒಟ್ಟು 9.45 ಲಕ್ಷ ರೂಪಾಯಿ ವರ್ಗಾಯಿಸಿದ್ದಾರೆ. ಆದರೂ ಬ್ಲ್ಯಾಕ್‌ಮೇಲ್ ಮುಂದುವರಿದ ಹಿನ್ನೆಲೆಯಲ್ಲಿ ಅವರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.
ಈ ಸಂಬಂಧ ಮೈಸೂರಿನ ಸೈಬರ್ ಹಾಗೂ ಆರ್ಥಿಕ ಅಪರಾಧ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಸಂಪರ್ಕ ಬೆಳೆಸುವಾಗ ಎಚ್ಚರಿಕೆ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…