ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.
ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಅವರು ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಂದಾಯ ನಿರೀಕ್ಷಕ ನಾಗೇಶ್ ಅವರು ಕೆಲಸ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಂತೆ ಮೊದಲ ಕಂತಿನಲ್ಲಿ ₹35 ಸಾವಿರ ಹಣವನ್ನು ನೀಡಲಾಗಿತ್ತು.
ನಂತರ ಎರಡನೇ ಕಂತಿನ ₹30 ಸಾವಿರ ಹಣವನ್ನು ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಾಗೇಶ್ ಅವರನ್ನು ಲಂಚದ ಹಣದೊಂದಿಗೆ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಐಗಳಾದ ರಾಜು, ನಿರ್ಮಲಾದೇವಿ ಹಾಗೂ ಶಾಂತಿನಾಥ್ ಹೊನ್ನೂರು ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…