ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಮಾರಾಟ ಮಾಡಲು ಮುಂದಾಗಿದ್ದ ಮಾಫಿಯಾ ಜಾಲವೊಂದನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ₹11.25 ಲಕ್ಷ ಮೌಲ್ಯದ 331 ಕ್ವಿಂಟಲ್ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ್ದ ಲಾರಿಗೆ ಪೊಲೀಸರು ಕಬ್ ಹಾಕಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67ರ ಜಂಬುನಾಥ ರಸ್ತೆಯ ಕಿರು ಸೇತುವೆ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಪಡಿತರ ಅಂಗಡಿಗೆ ಸೀಮಿತವಾಗಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಲಾರಿ ಚಾಲಕನ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಲಾರಿಯ ಮೌಲ್ಯ ಸುಮಾರು ₹25 ಲಕ್ಷ ಎಂದು ಅಂದಾಜಿಸಲಾಗಿದೆ.
ಅಕ್ಕಿಯು ಬಳ್ಳಾರಿ ಜಿಲ್ಲೆಗೆ ಪೂರೈಕೆಯಾದ ಪಡಿತರ ಅಕ್ಕಿಯಾಗಿದ್ದು, ಅದನ್ನು ಕಾನೂನು ಬಾಹಿರವಾಗಿ ರಾಯಚೂರಿಗೆ ಸಾಗಿಸಲು ಯತ್ನಿಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಈ ಘಟನೆ ಹಿನ್ನೆಲೆಯಲ್ಲಿ ಮತ್ತಷ್ಟು ಆರೋಪಿಗಳು ಇಡೀ ಜಾಲದ ಹಿಂದೆ ಇರುವ ಸಾಧ್ಯತೆ ಇದೆ ಎಂಬ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದು, ತನಿಖೆ ಮುಂದುವರೆದಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…