Latest

ಅಕ್ರಮ ಪಡಿತರ ಅಕ್ಕಿ ಸಾಗಾಟ ಬಯಲಾಗಿದ ನಂತರ ₹11.25 ಲಕ್ಷ ಮೌಲ್ಯದ ಅಕ್ಕಿ ಹಾಗೂ ಲಾರಿ ವಶ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಿ ಮಾರಾಟ ಮಾಡಲು ಮುಂದಾಗಿದ್ದ ಮಾಫಿಯಾ ಜಾಲವೊಂದನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ವೇಳೆ ₹11.25 ಲಕ್ಷ ಮೌಲ್ಯದ 331 ಕ್ವಿಂಟಲ್‌ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ್ದ ಲಾರಿಗೆ ಪೊಲೀಸರು ಕಬ್ ಹಾಕಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67ರ ಜಂಬುನಾಥ ರಸ್ತೆಯ ಕಿರು ಸೇತುವೆ ಬಳಿ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ, ಪಡಿತರ ಅಂಗಡಿಗೆ ಸೀಮಿತವಾಗಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಅವರ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಲಾರಿ ಚಾಲಕನ ಜೊತೆಗೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಳ್ಳಲಾದ ಲಾರಿಯ ಮೌಲ್ಯ ಸುಮಾರು ₹25 ಲಕ್ಷ ಎಂದು ಅಂದಾಜಿಸಲಾಗಿದೆ.

ಅಕ್ಕಿಯು ಬಳ್ಳಾರಿ ಜಿಲ್ಲೆಗೆ ಪೂರೈಕೆಯಾದ ಪಡಿತರ ಅಕ್ಕಿಯಾಗಿದ್ದು, ಅದನ್ನು ಕಾನೂನು ಬಾಹಿರವಾಗಿ ರಾಯಚೂರಿಗೆ ಸಾಗಿಸಲು ಯತ್ನಿಸುತ್ತಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಈ ಘಟನೆ ಹಿನ್ನೆಲೆಯಲ್ಲಿ ಮತ್ತಷ್ಟು ಆರೋಪಿಗಳು ಇಡೀ ಜಾಲದ ಹಿಂದೆ ಇರುವ ಸಾಧ್ಯತೆ ಇದೆ ಎಂಬ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದ್ದು, ತನಿಖೆ ಮುಂದುವರೆದಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago