Corruption

ಹೆಲ್ಮೆಟ್ ಇಲ್ಲದ ಸವಾರನಿಗೆ ದಂಡದ ಬೆದರಿಕೆ – ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಶಿರಸಿ ಪೊಲೀಸ್ ಅಮಾನತ್ತು..!

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ ಹುದ್ದಾರ್, ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಸವಾರನನ್ನು ತಡೆದು, ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಲಂಚ ಪಡೆದ ಘಟನೆಯ ವಿಡಿಯೋ ವೈರಲ್ ಆದ ಹಿನ್ನಲೆ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ವಿವರ

ಮೂರು ದಿನಗಳ ಹಿಂದೆ, ಶಿರಸಿಯ ಅಮಿನಳ್ಳಿಯ ಯುವಕರಿಬ್ಬರು ಆಸ್ಪತ್ರೆಗೆ ಹೋಗುವಾಗ, ತಪಾಸಣೆ ನಡೆಸುತ್ತಿದ್ದ ಪೊಲೀಸರು ಅವರನ್ನು ತಡೆದರು. ಚಂದ್ರಶೇಖರ್ ಹುದ್ದಾರ್ ಅವರು ಬೈಕ್‌ಗೆ ವಿಮೆ, ಹೊಗೆ ತಪಾಸಣಾ ಪತ್ರ ಇಲ್ಲದೆ ಇರುವುದನ್ನು ಹಾಗೂ ಸವಾರರು ಹೆಲ್ಮೆಟ್ ಧರಿಸದಿರುವುದನ್ನು ಪ್ರಶ್ನಿಸಿದರು.

ಆರಂಭದಲ್ಲಿ ಅವರ ಮಾತುಗಳು ಪೋಲಿಸರ ಪಾಠ ಶೈಲಿಯಲ್ಲಿತ್ತು –

“ಸಾವಿರ ರೂಪಾಯಿ ದಂಡ ಎದೆ ಹಿಡಿಯಬಹುದು, ಆದರೆ ಹೆಲ್ಮೆಟ್ ಇಲ್ಲದೆ ಅಪಘಾತವಾದರೆ 10-15 ಲಕ್ಷ ರೂ. ಖರ್ಚಾಗಬಹುದು”

“ಹೆಲ್ಮೆಟ್ ಧರಿಸದೆ ಅಪಘಾತವಾದರೆ, ನಿಮ್ಮ ಕುಟುಂಬದವರ ಪರಿಸ್ಥಿತಿ ಹೇಗಾಗಬಹುದು?”

ಈ ಮಾತುಗಳ ಬಳಿಕ, ಅವರು ಕೋರ್ಟಿಗೆ ಕೇಸ್ ಹಾಕಬೇಕೆಂದು ಸೂಚಿಸಿದರು. ಆದರೆ, ಯುವಕರು ತಪ್ಪು ಮಾಡಿದ್ದಾಗಿ ಒಪ್ಪಿಕೊಂಡು ದಂಡವನ್ನು ತಪ್ಪಿಸಲು ಲಂಚ ನೀಡಲು ಪ್ರಯತ್ನಿಸಿದರು.

ಕೊನೆ ಕ್ಷಣದಲ್ಲಿ ಕೈ ಒಡ್ಡಿದ ಕಾನ್ಸ್ಟೇಬಲ್!

ಆರಂಭದಲ್ಲಿ ಲಂಚ ತೆಗೆದುಕೊಳ್ಳಲು ನಿರಾಕರಿಸಿದ್ದ ಚಂದ್ರಶೇಖರ್ ಹುದ್ದಾರ್, ಕೊನೆಗೆ ಆ ಹಣ ಸ್ವೀಕರಿಸಿದರು. ಆದರೆ, ಯುವಕರು ಈ ಎಲ್ಲ ಘಟನೆಗಳನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರು. ಈ ವೀಡಿಯೋ ವೈರಲ್ ಆದ ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು.

ಪೊಲೀಸ್ ಇಲಾಖೆ ಕಠಿಣ ಕ್ರಮ

ಪೊಲೀಸ್ ಅಧಿಕೃತ ಬಾಡಿ ಕ್ಯಾಮೆರಾ ಇರಲಿಲ್ಲ – ಇದು ನಿಯಮ ಉಲ್ಲಂಘನೆ

ಲಂಚ ಸ್ವೀಕರಿಸಿದ್ದ ದೃಶ್ಯ ಸಮಾಜ ಮಾಧ್ಯಮಗಳಲ್ಲಿ ಭಾರೀ ಟೀಕೆಗೊಳಪಟ್ಟಿತು

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧೀಕ್ಷಕ ಎಂ. ನಾರಾಯಣ, ಚಂದ್ರಶೇಖರ್ ಹುದ್ದಾರ್ ಅವರನ್ನು ತಕ್ಷಣ ಅಮಾನತು ಮಾಡುವ ಆದೇಶ ಹೊರಡಿಸಿದರು

ಈ ಘಟನೆ, ಲಂಚ ವಿರುದ್ಧದ ಹೋರಾಟಕ್ಕೆ ಮತ್ತೊಂದು ಎಚ್ಚರಿಕೆಯ ಸಂಕೇತವಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

10 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

14 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

17 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

22 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago