Sports

ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ರಿಂಕು ಸಿಂಗ್ ಹಾಗೂ ಸಂಸದೆ ಪ್ರಿಯಾ ಸರೋಜ್.

ಭಾರತ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ಪ್ರಿಯಾ ಸರೋಜ್ ಅವರ ತಂದೆ ಹಾಗೂ ಸಮಾಜವಾದಿ ಪಕ್ಷದ ಶಾಸಕ ತೂಫಾನಿ ಸರೋಜ್ ಈ ಸುದ್ದಿಯನ್ನು ಮಾಧ್ಯಮಗಳಿಗೆ ಖಚಿತಪಡಿಸಿದರು.

“ಎರಡೂ ಕುಟುಂಬಗಳು ಈ ಸಂಬಂಧ ಕುರಿತು ಮಾತುಕತೆ ಪೂರ್ಣಗೊಳಿಸಿವೆ. ರಿಂಕು ಸಿಂಗ್ ಅವರ ಪಾಲಕರು ಜ. 16ರಂದು ಅಲಿಗಢದಲ್ಲಿ ನಮ್ಮನ್ನು ಭೇಟಿ ಮಾಡಿ ವಿವರಣೆ ನಡೆಸಿದ್ದಾರೆ. ಆದರೆ ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕಗಳನ್ನು ನಿಗದಿಪಡಿಸುವ ಕಾರ್ಯ ಇನ್ನೂ ಬಾಕಿಯಾಗಿದೆ,” ಎಂದು ಅವರು ಹೇಳಿದರು.

ತೂಫಾನಿ ಸರೋಜ್ ಅವರ ಹೇಳಿಕೆಯ ಪ್ರಕಾರ, ರಿಂಕು ಮತ್ತು ಪ್ರಿಯಾ ಕಳೆದ ಒಂದು ವರ್ಷದಿಂದ ಪರಸ್ಪರ ಪರಿಚಿತರಾಗಿ, ಮೆಚ್ಚಿಕೆ ವ್ಯಕ್ತಪಡಿಸಿದ್ದರು. ಈ ಸಂಬಂಧಕ್ಕೆ ಎರಡೂ ಕುಟುಂಬಗಳ ಹಿರಿಯರ ಒಪ್ಪಿಗೆಯನ್ನು ಪಡೆದು, ಇದೀಗ ಈ ಸಂಬಂಧವನ್ನು ಅಧಿಕೃತಗೊಳಿಸಲಾಗಿದೆ.

ತೂಫಾನಿ ಸರೋಜ್ ಅವರ ಪ್ರಕಾರ, “ಪ್ರಿಯಾ ಅವರ ಸ್ನೇಹಿತೆಯ ತಂದೆಯೂ ಕ್ರಿಕೆಟರ್ ಆಗಿದ್ದರಿಂದ, ಅವರ ಮೂಲಕ ಪ್ರಿಯಾ ಹಾಗೂ ರಿಂಕು ಪರಿಚಯ ಹೊಂದಿದರು. ನಿಶ್ಚಿತಾರ್ಥ ಮತ್ತು ಮದುವೆ ಸಂಬಂಧಿತ ಕಾರ್ಯಕ್ರಮಗಳನ್ನು ಸಂಸತ್ ಅಧಿವೇಶನದ ನಂತರ ಆಯೋಜಿಸಲಾಗುವುದು. ನಿಶ್ಚಿತಾರ್ಥವನ್ನು ಲಖನೌನಲ್ಲಿ ನಡೆಸಲು ನಿರ್ಧರಿಸಲಾಗಿದೆ.”

ಜ. 22ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ರಿಂಕು ಸಿಂಗ್ ಆಟವಾಡಲಿದ್ದಾರೆ. ಇದಾದ ಬಳಿಕ ಅವರು ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಕಾರಣದಿಂದ ಮದುವೆ ಕಾರ್ಯಕ್ರಮಗಳು ರಿಂಕು ಅವರ ಕ್ರೀಡಾ ಶಿಡ್ಯೂಲ್‌ ಗೆ ಅಡ್ಡಿಯಾಗದಂತೆ ಪ್ಲಾನ್ ಮಾಡಲಾಗುವುದು ಎಂದು ತೂಫಾನಿ ಸರೋಜ್ ತಿಳಿಸಿದ್ದಾರೆ.

ಪ್ರಿಯಾ ಸರೋಜ್ ವಾರಾಣಸಿಯ ಕಾರ್ಖಿಯೊ ಗ್ರಾಮದ ನಿವಾಸಿಯಾಗಿದ್ದು, 25ನೇ ವಯಸ್ಸಿನಲ್ಲಿ ಜೌನ್ಪುರ ಜಿಲ್ಲೆಯ ಮಚ್ಲಿಶಹರ್ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಅವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ್ದು, ಅಮಿಟಿ ವಿಶ್ವವಿದ್ಯಾಲಯದ ಕಾನೂನು ಪದವೀಧರರಾಗಿದ್ದಾರೆ. ಪ್ರಿಯಾ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಂದೆಯ ಪರ ಪ್ರಚಾರ ಮಾಡುತ್ತಾ, ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago