Categories: CrimeLatest

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಮೂರು FIR, ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿಯ ಎನ್‌.ಆರ್‌. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಮೆರವಣಿಗೆ ಸಂದರ್ಭದಲ್ಲಿ ರಾಷ್ಟ್ರರಕ್ಷಣಾ ಪಡೆ ಕಾರ್ಯಕರ್ತರು ಹಾಗೂ ಮತ್ತೊಂದು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಈ ವೇಳೆ ರಾಷ್ಟ್ರರಕ್ಷಣಾ ಪಡೆ ಕಾರ್ಯಕರ್ತ ಮುರುಳಿ ಅವರ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಳಿಕ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರು ನಡುರಸ್ತೆಯಲ್ಲೇ ಧರಣಿ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಮೂರು ಪ್ರತ್ಯೇಕ ಪ್ರಕರಣ

ಮೊದಲ ಪ್ರಕರಣ: ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಗುಂಪುಗಳ ನಡುವೆ ದ್ವೇಷಕ್ಕೆ ಕಾರಣವಾದ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ಪುನೀತ್ ಗೌಡ, ವಿನೋದ್ ನಾಯಕ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ ಹಾಗೂ ವಿನೋದ್ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಎರಡನೇ ಪ್ರಕರಣ: ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಮಲ್ ಪಾಷಾ, ಅಬೂಬಕರ್ ಸಿದ್ದೀಕ್ ಹಾಗೂ ಸೈಯದ್ ಅನಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಮೂವರನ್ನೂ ಬಂಧಿಸಲಾಗಿದ್ದು, ಬಂಧಿತರು ಅಪ್ರಾಪ್ತರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂರನೇ ಪ್ರಕರಣ: ಸಾರ್ವಜನಿಕ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಘಟನಾ ಸ್ಥಳದಲ್ಲಿದ್ದ ಕೆಲವರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಕೆಎಸ್ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದ್ದು, ಸ್ಥಳೀಯ ಪೊಲೀಸರು ನಿರಂತರ ಗಸ್ತು ನಡೆಸುತ್ತಿದ್ದಾರೆ. ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗಂಗಾಜಲ ಹಿಡಿದು ಲಂಚ ಹಂಚಿಕೆ ಪ್ರಮಾಣ! ಶಹಜಹಾನ್‌ಪುರ ಕಾರ್ಪೊರೇಟರ್‌ಗಳ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲವನ್ನು ಕೈಯಲ್ಲಿ ಹಿಡಿದು ಲಂಚದ ಹಣವನ್ನು ತಮ್ಮ ನಡುವೆ…

9 hours ago

ಮಗಳ ಮುಂದೆಯೇ ಲೈಂಗಿಕ ಕೃತ್ಯ: ಪತ್ನಿಯ ಖಾಸಗಿ ವಿಡಿಯೋ ಅಪ್‌ಲೋಡ್ ಆರೋಪ, ಪತಿ ಬಂಧನ

ಕೊಲ್ಲಂ: ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಪ್ರಕರಣವೊಂದು ಕೇರಳದ ಕೊಲ್ಲಂನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಖಾಸಗಿ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್…

9 hours ago

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

2 days ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

2 days ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

3 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

3 days ago