Latest

ರಿಷಿಕೇಶ ದುರಂತ: ರಿವರ್‌ ರಾಫ್ಟಿಂಗ್ ವೇಳೆ ನೀರಿಗೆ ಬಿದ್ದು ಯುವಕನ ಸಾವು

ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ರಿಷಿಕೇಶದಲ್ಲಿ ನಡೆಯುತ್ತಿದ್ದ ರಿವರ್‌ ರಾಫ್ಟಿಂಗ್‌ನಾಗಮನ ಒಂದು ದುರಂತದಲ್ಲಿ ಅಂತ್ಯ ಕಂಡಿದೆ. ಡೆಹ್ರಾಡೂನ್‌ನಿಂದ ಪ್ರವಾಸಕ್ಕೆ ಬಂದಿದ್ದ ಸಾಗರ್‌ ನೇಗಿ ಎಂಬ ಯುವಕ, ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಘಟನೆ ರಿಷಿಕೇಶದ ಶಿವಪುರಿ ಬಳಿ ನಡೆದಿದೆ. ಗಂಗಾ ನದಿಯಲ್ಲಿ ರಿವರ್‌ ರಾಫ್ಟಿಂಗ್ ನಡೆಸುತ್ತಿದ್ದ ವೇಳೆ, ದೋಣಿಯಲ್ಲಿ ಸಾಗುತ್ತಿದ್ದ ಸಾಗರ್‌ ನೇಗಿ ಮಾರ್ಗಮಧ್ಯೆ ಆಯತಪ್ಪಿ ನೀರಿಗೆ ಜರಿದಿದ್ದಾರೆ. ಆ ಕ್ಷಣದಲ್ಲಿ ನದಿಯಲ್ಲಿ ನೀರಿನ ಪ್ರವಾಹವೂ ತೀವ್ರವಾಗಿದ್ದು, ಅವರು ಮತ್ತೆ ದೋಣಿಗೆ ಹತ್ತಲು ಸಾಧ್ಯವಾಗಲಿಲ್ಲ. ಜೊತೆಗೆ ಇದ್ದ ತಂಡದವರು ಸಹ ಯತ್ನಿಸಿದರೂ, ಆತನನ್ನು ರಕ್ಷಿಸಲು ವಿಫಲರಾದರು.

ಸಾಗರ್‌ ನೇಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ದೃಶ್ಯಗಳು ಈಗ  ಹರಿದಾಡುತ್ತಿವೆ. ಘಟನೆಯಾದ ಕೆಲವು ಗಂಟೆಗಳ ಬಳಿಕ ರಕ್ಷಣಾ ಸಿಬ್ಬಂದಿ ಅವರ ಶವವನ್ನು ಗಂಗಾ ನದಿಯಿಂದ ಪತ್ತೆ ಹಚ್ಚಿದ್ದಾರೆ.

ಘಟನೆಯ ನಂತರ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತಪೋವನ್‌ ಹೊರಠಾಣೆಯ ಉಸ್ತುವಾರಿ ಪ್ರದೀಪ್‌ ರಾವತ್‌ ಅವರು ಮಾತನಾಡಿ, ಪ್ರಕರಣದ ಸಂಬಂಧ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು.

ಈ ಘಟನೆ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ರಿವರ್‌ ರಾಫ್ಟಿಂಗ್ ವೇಳೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

5 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

9 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

12 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago