Latest

ಸಿರಿಗೆರೆ ಬಳಿ ದರೋಡೆ ಯತ್ನ ವಿಫಲ: ಮಾರಕಾಸ್ತ್ರಗಳೊಂದಿಗೆ ಮೂವರು ಬಂಧನ

ಚಿತ್ರದುರ್ಗ: ಹೊಸಕೆರೆ ಸಮೀಪದ ಹಳ್ಳದ ಬಳಿ ಕಾರಿನಲ್ಲಿ ಕುಳಿತು ದರೋಡೆ ಯತ್ನಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಶಂಕಿತ ತಂಡವೊಂದನ್ನು ಸಿರಿಗೆರೆ ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದು ಮಹತ್ವದ ಸಾಧನೆ ಮಾಡಿದ್ದಾರೆ.

ಗ್ರಾಮಸ್ಥರಿಂದ ದೊರಕಿದ ಖಚಿತ ಮಾಹಿತಿಯ ಮೇಲೆ ಕ್ರಮ ಕೈಗೊಂಡ ಪೊಲೀಸರು, ಶಂಕಿತರು ದರೋಡೆಗೆ ಬಳಸುತ್ತಿದ್ದ ಕಾರು ಹಾಗೂ ಅದರೊಳಗೆ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕಾರಿನಲ್ಲಿ ಕಾರದ ಪುಡಿಯೂ ಪತ್ತೆಯಾಗಿದೆ.

ಬಂಧಿತರು ಐವರಿದ್ದ ತಂಡದ ಸದಸ್ಯರಾಗಿದ್ದು, ಅವರಲ್ಲಿ ಮೂವರು ಪೊಲೀಸರ ಕೈಗೆ ಬಿದ್ದರೆ, ಇನ್ನು ಇಬ್ಬರು ದೌಡಾಯಿಸಿದ್ದಾರೆ. ಪೊಲೀಸರು ಇವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ತಂಡವು ಸುತ್ತಮುತ್ತಲಿನ ಪ್ರದೇಶದ ಪ್ರಮುಖ ಅಡಿಕೆ ವ್ಯಾಪಾರಿಯೊಬ್ಬರು ನಗದು ಹಣವನ್ನು ಸಾಗಿಸುತ್ತಿರುವ ಮಾಹಿತಿ ಹೊಂದಿದ್ದಾಗಿ ತಿಳಿದು ಬಂದಿದೆ. ಈ ನಗದನ್ನು ದರೋಡೆಗೊಳಿಸುವ ಉದ್ದೇಶದಿಂದವೇ ಆರೋಪಿಗಳು ಕಾರ್ಯಚರಣೆ ರೂಪಿಸಿದ್ದರು ಎನ್ನಲಾಗಿದೆ.

ಚೌಕಸತೆಯಿಂದ ಪ್ಲ್ಯಾನ್ ರೂಪಿಸಿದ್ದ ಆರೋಪಿಗಳು, ತಮ್ಮ ಕಾರಿನ ಮುಂಭಾಗದ ನಂಬರ್ ಪ್ಲೇಟಿಗೆ ಕೆಸರು ಮೆತ್ತಿದ್ದರೆ, ಹಿಂಭಾಗದ ನಂಬರ್‌ ಪ್ಲೇಟಿಗೆ ಸ್ಟಿಕರ್‌ ಅಂಟಿಸಿ ಗುರುತಿಸದಂತೆ ಜಾಗ್ರತೆಯಿಂದ ಕಾರ್ಯಾಚರಣೆ ನಡೆಸಿದ್ದರು.

ಘಟನೆಯ ನಂತರ ಸಿರಿಗೆರೆ ಠಾಣೆಗೆ ಭೇಟಿ ನೀಡಿದ ಚಿತ್ರದುರ್ಗ ಡಿವೈಎಸ್‌ಪಿ ದಿನಕರ್, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಚುರುಕು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

20 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

1 day ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

1 day ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

2 days ago