Latest

ಜಪಾನ್‌ನಲ್ಲೂ ರಾಕಿ ಕ್ರೇಜ್; 10 ದಿನಕ್ಕೆ 14000 ಟಿಕೆಟ್ ಮಾರಾಟ!

ಕನ್ನಡದ KGF ಸರಣಿ ಸಿನಿಮಾ ಜಪಾನ್ ದೇಶದಲ್ಲಿ ಸದ್ದು ಮಾಡ್ತಿದೆ. ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೀತಿದೆ. ಜುಲೈ 14ಕ್ಕೆ KGF ಚಾಪ್ಟರ್-1 ಹಾಗೂ ಚಾಪ್ಟರ್-2 ಜಪಾನ್ ಪ್ರೇಕ್ಷಕರ ಮುಂದೆ ಹೋಗಿತ್ತು. ಸದ್ಯ ಸಿನಿಮಾ 12 ದಿನ ಪೂರೈಸಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. 2 ವೀಕೆಂಡ್‌ಗಳಲ್ಲಿ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು ಸಿನಿಮಾ ಕಲೆಕ್ಷನ್ ಹೆಚ್ಚಾಗಿದೆ.
ರಾಜಮೌಳಿ ನಿರ್ದೇಶನದ ‘RRR’ ಸಿನಿಮಾ ಜಪಾನ್ ಬಾಕ್ಸಾಫೀಸ್‌ನಲ್ಲಿ 120 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಇದರ ಬೆನ್ನಲ್ಲೇ ಕನ್ನಡದ ‘KGF’ ಹಾಗೂ ತೆಲುಗಿನ ‘ರಂಗಸ್ಥಳಂ’ ಒಟ್ಟಿಗೆ ಜಪಾನ್ ದೇಶದ ಬೆಳ್ಳಿತೆರೆಗಳ ಮೇಲೆ ಅಪ್ಪಳಿಸಿವೆ. ಮೂರು ಚಿತ್ರಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ನೋಡಿದವರೆಲ್ಲಾ ಮೆಚ್ಚಿ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ತೆಲುಗಿನ RRR ಸಿನಿಮಾ ಜಪಾನ್ ದೇಶದಲ್ಲಿ 240ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಆದರೆ 90 ಸ್ಕ್ರೀನ್‌ಗಳಲ್ಲಿ KGF ಚಾಪ್ಟರ್-1 ಹಾಗೂ 85 ಸ್ಕ್ರೀನ್‌ಗಳಲ್ಲಿ ಚಾಪ್ಟರ್-2 ಆರ್ಭಟ ಶುರುವಾಗಿತ್ತು. 10 ದಿನಕ್ಕೆ ಅಂದಾಜು 20 ಮಿಲಿಯನ್ ಯೆನ್ ಕಲೆಕ್ಷನ್ ಆಗಿದೆಯಂತೆ. ಅಂದರೆ ಭಾರತದ ರೂಪಾಯಿಯಲ್ಲಿ ಅಂದಾಜು 1.16 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗ್ತಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಜಪಾನ್ ದೇಶದಲ್ಲಿ ರಿಲೀಸ್ ಆಗಿದೆ. ಕನ್ನಡ ಸಿನಿಮಾಗಳ ಬಗ್ಗೆ ಪರಿಚಯವೇ ಇಲ್ಲದ ಜಪಾನೀಯರು ಸಿನಿಮಾ ನೋಡಿ ಖುಷಿಯಾಗಿದ್ದಾರೆ.
12 ಕೋಟಿ ಜನ ಸಂಖ್ಯೆಯ ಪುಟ್ಟ ದೇಶ ಜಪಾನ್. ಅಲ್ಲಿ ಸಿನಿಮಾ ಥಿಯೇಟರ್‌ಗಳು ಚಿಕ್ಕದಾಗಿ ಇರುತ್ತದೆ. ಸಿನಿಮಾ ನೋಡುವವರ ಸಂಖ್ಯೆ ಕೂಡ ಕಡಿಮೆಯೇ ಇರುತ್ತದೆ. ಆದರೂ ಭಾರತದ ಕೆಲ ಸಿನಿಮಾಗಳಿಗೆ ಅಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಇದೀಗ KGF ಸರಣಿ ಸಿನಿಮಾಗಳನ್ನು ಕೂಡ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. 2 ಚಾಪ್ಟರ್ ಸೇರಿ ಈಗಾಗಲೇ 14 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿದೆ. ಪ್ರೇಕ್ಷಕರು ಸಲಾಂ ರಾಕಿ ಭಾಯ್ ಎಂದು ಜೈಕಾರ ಹಾಕುತ್ತಿದ್ದಾರೆ.
KGF ಸಿನಿಮಾ ನಿಜಕ್ಕೂ ಜಪಾನ್ ಪ್ರೇಕ್ಷಕರ ಮನಗೆದ್ದಿದೆ. ಚಿತ್ರದ ಸಾಂಗ್ಸ್, ಡೈಲಾಗ್ಸ್‌ನ ಅಲ್ಲಿನ ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿ ರಾಕಿಭಾಯ್ ಕ್ರೇಜ್ ಜೋರಾಗಿದೆ. ರಾಕಿಭಾಯ್ ರೀತಿ ದೊಡ್ಡ ಸುತ್ತಿಗೆ ಹಿಡಿದು ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ. ರಾಕಿ, ಅಧೀರ ಲುಕ್ ಪೇಪರ್ ಮಾಸ್ಕ್‌ಗಳನ್ನು ಹಾಕಿಕೊಂಡು ಸಿನಿಮಾ ನೋಡಿ ಖುಷಿಪಡುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ವೈರಲ್ ಆಗ್ತಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago