ಯಲ್ಲಾಪುರ (ರಾಮನಗರ): ಹದಿನಾರು ಗಂಭೀರ ಪ್ರಕರಣಗಳಲ್ಲಿ ಅಂತರಜಿಲ್ಲಾ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಯಲ್ಲಾಪುರದ ಅರಣ್ಯ ಪ್ರದೇಶದಲ್ಲಿ ಪೋಲೀಸರು ಫೈರಿಂಗ್ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.
ಯಲ್ಲಾಪುರ–ಹಳಿಯಾಳ ರಾಜ್ಯ ಹೆದ್ದಾರಿಯ ಸಮೀಪದ ಕಣ್ಣಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪ್ರವೀಣ್ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಆರೋಪಿಯು ಪೋಲೀಸರನ್ನು ಕಂಡು ಚಾಕು ಮತ್ತು ಕಲ್ಲುಗಳಿಂದ ಪಿಎಸ್‌ಐ ಮಹಾಂತೇಶ ನಾಯಕ ಹಾಗೂ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಎಂದು ತಿಳಿದುಬಂದಿದೆ.
ಆತ್ಮರಕ್ಷಣೆಗೆ ಫೈರಿಂಗ್ ನಡೆಸಿದ ಪಿಎಸ್‌ಐ ಮಹಾಂತೇಶ ನಾಯಕ, ಮೊದಲು ಗಾಳಿಯಲ್ಲಿ ಎರಡು ಸುತ್ತು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ಹಿಂಜರಿಯದೇ ದಾಳಿ ಮುಂದುವರೆಸಿದ್ದ ಹಿನ್ನೆಲೆಯಲ್ಲಿ ಆತನ ಬಲಗಾಲಿನ ಮಂಡಿಯ ಕೆಳಭಾಗಕ್ಕೆ ಗುಂಡು ಹಾರಿಸಿ ಕಬಳಿಸಲಾಗಿದೆ. ಗಾಯಗೊಂಡಿರುವ ಪ್ರವೀಣ್‌ನನ್ನು ತಕ್ಷಣ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ಮಹಾಂತೇಶ ನಾಯಕ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಧಿತನ ವಿರುದ್ಧ ರಾಮನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ಒಟ್ಟು 16ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ದಾಂಡೇಲಿ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ, ಜೋಯಿಡಾದ ಸಿಪಿಐ ಚಂದ್ರಶೇಖರ ಹರಿಹರ ಹಾಗೂ ಪಿಎಸ್‌ಐ ಮಹಾಂತೇಶ ನಾಯಕ ನೇತೃತ್ವದಲ್ಲಿ ತಂಡವೊಂದು ಯಶಸ್ವಿಯಾಗಿ ಮುನ್ನಡೆಸಿದೆ.
ಘಟನೆಯ ಬಳಿಕ ಜಿಲ್ಲೆ ಎಸ್‌ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಲಾಗಿದೆ. ವರದಿ: ಮಂಜುನಾಥ ಎಫ್ ಎಚ್
ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…
ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…
ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…
ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…