ಬೆಳಗಾವಿ: ಗಡಿಪಾರು ಆದೇಶದಡಿ ಧಾರವಾಡ ಜೈಲಿನಲ್ಲಿದ್ದ ರೌಡಿಶೀಟರ್ ಒಬ್ಬರು ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸಮೀಪ ನಡೆದಿದೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮೃತನನ್ನು ಗೋಕಾಕ್ ಫಾಲ್ಸ್ ಸಮೀಪದ ಮಾಣಿಕವಾಡಿ ಗ್ರಾಮದ ಮುತ್ತುಸ್ವಾಮಿ ಹೃದಯರಾಜ ಪಾಸ್ಕಲ್ (30) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಗಡಿಪಾರು ಆದೇಶದಡಿ ಕೆಲ ದಿನಗಳಿಂದ ಧಾರವಾಡ ಜೈಲಿನಲ್ಲಿದ್ದ ಮುತ್ತುಸ್ವಾಮಿ ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಹೊರಬಂದ ಬಳಿಕ ಸ್ನೇಹಿತರೊಂದಿಗೆ ಹಿಡಕಲ್ ಡ್ಯಾಂ ಪ್ರದೇಶಕ್ಕೆ ತೆರಳಿದ್ದ ವೇಳೆ, ಮೊದಲೇ ಹೊಂಚುಹಾಕಿ ಕಾಯುತ್ತಿದ್ದ ಎನ್ನಲಾದ ವಿರೋಧಿ ಗುಂಪು ಏಕಾಏಕಿ ದಾಳಿ ನಡೆಸಿದೆ.
ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಮುತ್ತುಸ್ವಾಮಿಯನ್ನು ರಕ್ತದ ಮಡುವಿನಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿ ಆರಂಭವಾಗುತ್ತಿದ್ದಂತೆಯೇ ಅವರೊಂದಿಗೆ ಇದ್ದ ಸ್ನೇಹಿತರು ಸ್ಥಳದಿಂದ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುತ್ತುಸ್ವಾಮಿಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಮಕನಮರಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಗೆ ಹಳೆಯ ವೈಷಮ್ಯ ಕಾರಣವೇ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಅಂಕೋಲಾ: ನಕಲಿ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಸಹಿ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿ ಜಮೀನನ್ನು ಅಕ್ರಮವಾಗಿ ಪರಭಾರೆ ಮಾಡಿದ…
ಬಾಗಲಕೋಟೆ: ಸ್ವಾವಲಂಬಿ ಸಾರಥಿ ಯೋಜನೆಯಡಿ ಮಂಜೂರಾದ ₹3 ಲಕ್ಷ ಸಹಾಯಧನದ ಮಂಜೂರಾತಿ ಆದೇಶ ನೀಡಲು ಹಾಗೂ ವಾಹನದ ಜಿಪಿಎಸ್ ಫೋಟೊ…
ಗೌರಿಬಿದನೂರು: ಮುಂಜಾನೆ ಕೆಲಸಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 25 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ಸಂಜೆ ಆತನ ಮೃತದೇಹ ಕೆರೆಯಲ್ಲಿ…
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…