Categories: CrimeLatest

ಮದ್ಯದ ಅಮಲಿನಲ್ಲಿ ರೌಡಿಶೀಟರ್‌ನ ಪುಂಡಾಟ; ಪೊಲೀಸರ ಮೇಲೆಯೇ ಹಲ್ಲೆ, ಕೊಲೆ ಬೆದರಿಕೆ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್‌ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಪಿ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ.

ಸ್ಥಳೀಯ ಮೂಲಗಳ ಪ್ರಕಾರ, ‘ಮಚ್‌ ಮಂಜ’ ಎಂದು ಪರಿಚಿತನಾಗಿರುವ ರೌಡಿಶೀಟರ್‌ ಮೌರ್ಯ ಹೋಟೆಲ್‌ ಸಮೀಪ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಬಳಿಕ ಹೋಟೆಲ್‌ ಎದುರಿನ ಬೀಡಾ ಅಂಗಡಿ ಬಳಿ ರಾಘವೇಂದ್ರ ದತ್ತಾ ಬಾಂದೇಕರ್‌ ಹಾಗೂ ಮಂಜುನಾಥ್‌ ಸುಬ್ರಾಯ ಅವರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಗಲಾಟೆಯನ್ನು ತಡೆಯಲು ಮುಂದಾದ ಹೋಟೆಲ್‌ ಸಿಬ್ಬಂದಿ ಸದಾಶಿವ ಪೂಜಾರಿ ಅವರ ಮೇಲೂ ಆರೋಪಿ ಹಲ್ಲೆ ನಡೆಸಿದ್ದರಿಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಯತ್ನಿಸಿದರೂ, ಮದ್ಯದ ಅಮಲಿನಲ್ಲಿದ್ದ ಆರೋಪಿ ಪೊಲೀಸರ ಮಾತನ್ನು ಲೆಕ್ಕಿಸದೇ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿ, ಗುದ್ದಾಟಕ್ಕೆ ಇಳಿದಿದ್ದಾನೆ.

ಇದರಲ್ಲೂ ತೃಪ್ತನಾಗದ ಆತ, ತನ್ನ ಬಟ್ಟೆಗಳನ್ನು ಕಳಚಿಕೊಂಡು ಅಸಭ್ಯವಾಗಿ ವರ್ತಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಅಶೋಕ ಹಾಗೂ ಹನುಮಂತ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಅಲ್ಲದೆ, ಪೊಲೀಸ್ ವಾಹನದ ಮುಂದೆ ಮಲಗಿ ಕಾರ್ಯಾಚರಣೆಗೆ ಅಡ್ಡಿಪಡಿಸಿ ಸಾಕಷ್ಟು ಹೊತ್ತು ಹೈಡ್ರಾಮಾ ನಡೆಸಿದ್ದಾನೆ.

ಕೊನೆಗೆ ಪೊಲೀಸರು ಹರಸಾಹಸ ಪಟ್ಟು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಪುಂಡಾಟ ಮೆರೆದಿರುವುದು ಹಾಗೂ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

23 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago