Categories: CrimeLatest

ಜೆ.ಪಿ. ನಗರದಲ್ಲಿ ರೌಡಿಶೀಟರ್ ರಾಜುಬಾಯ್ ಭೀಕರ ಹತ್ಯೆ: ಜನಸಂದಣಿ ಮಧ್ಯೆ ದುಷ್ಕರ್ಮಿಗಳ ಅಟ್ಟಹಾಸ

ಬೆಂಗಳೂರು: ನಗರದ ಜೆ.ಪಿ. ನಗರದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ರಾಜುಬಾಯ್ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಸಾರ್ವಜನಿಕರ ಕಣ್ಣೆದುರೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಸೃಷ್ಟಿಸಿದೆ.

ಪ್ರಗತಿಪುರ ನಿವಾಸಿಯಾಗಿದ್ದ ರಾಜುಬಾಯ್ ಮೇಲೆ ಸಂಜೆ ಸುಮಾರು 5.30ರ ವೇಳೆಗೆ ಐಜಿ ಸರ್ಕಲ್ ಸಮೀಪ ದಾಳಿ ನಡೆದಿದೆ. ಟೀ ಕುಡಿದು ಹಿಂದಿರುಗುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ನಾಲ್ಕೈದು ಮಂದಿ ದುಷ್ಕರ್ಮಿಗಳು ಏಕಾಏಕಿ ಲಾಂಗ್ ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಜೆ ವೇಳೆ ರಸ್ತೆಯಲ್ಲಿ ವಾಹನಗಳ ಸಂಚಾರ ಮತ್ತು ಜನರ ಓಡಾಟ ಹೆಚ್ಚಿದ್ದರೂ, ದುಷ್ಕರ್ಮಿಗಳು ಯಾವುದೇ ಭಯವಿಲ್ಲದೆ ರಾಜುಬಾಯ್‌ನನ್ನು ಅಟ್ಟಾಡಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ನಡೆದ ಕ್ಷಣಗಳಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಮೃತ ರಾಜುಬಾಯ್ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೆಯ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಜೆ.ಪಿ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago