Latest

ಜನರಿಗೊಂದು ನಿಯಮ! ಪೊಲೀಸರಿಗೊಂದು ನಿಯಮ!

ಜನರನ್ನು ರಕ್ಷಿಸಬೇಕಾದ ಪೋಲಿಸರೇ ಜನರನ್ನು ತುಳಿದು ಮುಂದೆ ಬರುತ್ತಿದ್ದಾರೆ. ಸಾರ್ವಜನಿಕರು ನಿಯಮ ಪಾಲಿಸದಿದ್ದಲ್ಲಿ ಸರಿಪಡಿಸಲಿ ಎಂದು ಇವರನ್ನು ಬಿಟ್ಟರೆ ಇವರು ಅದನ್ನೇ ನೆಪಮಾಡಿಕೊಂಡು ಅವರದ್ದೇ ಆದ ನಿಯಮವನ್ನು ಹುಟ್ಟುಹಾಕಿಕೊಂಡಿದ್ದಾರೆ. ವಾಹನ ಸವಾರರು ತುರ್ತಾಗಿ ಚಲಿಸುವಂತಹ ಸಂದರ್ಭದಲ್ಲಿ ಚಿಕ್ಕ ಪುಟ್ಟ ತಪ್ಪುಗಳನ್ನು ಮಾಡಿದ್ದರೂ ಸಹ ಅವರ ಬಳಿ ಹಣ ಪೀಕದೆ ಬಿಡುವುದಿಲ್ಲ ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್ ನನಗೆ ಅರ್ಜೆಂಟ್ ಇದೆ ಎಂದು ಪೆಟ್ರೋಲ್ ಬಂಕಿನಲ್ಲಿ ಕ್ಯೂನಲ್ಲಿ ಬರುವ ಬದಲು ಮಧ್ಯದಲ್ಲಿ ನುಗ್ಗಿ ನನಗೆ ನಿಯಮ ಅನ್ವಯಿಸುವುದಿಲ್ಲ ನಾನು ಪೊಲೀಸ್ ಎಂದು ಹೇಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕುವ ಹುಡುಗ ಪೋಲಿಸ್ ಎಂಬ ಕಾರಣಕ್ಕೆ ಭಯದಿಂದ ಪೊಲೀಸ್ ಹೇಳಿದಂತೆ ಮಾಡಿದ್ದಾನೆ. ಈ ಪೊಲೀಸ್ ನ ಬಳಿ ಸಾರ್ವಜನಿಕರು ಪ್ರಶ್ನಿಸಿದರೆ ನನಗೆ ತುಂಬ ಆತುರದ ಕೆಲಸವಿದೆ ನಾನೊಬ್ಬ ಪೋಲಿಸ್ ಎಂದು ಹೇಳಿ ಆತುರದಲ್ಲಿರುವವನಂತೆ ನಟಿಸಿ ಕ್ಷುಲ್ಲಕ ಕಾರಣಗಳು ಮುಂದೆ ಇಟ್ಟು ಜನರ ಕೆಂಗಣ್ಣಿಗೆ ಗುರಿಯಾಗಿರುವ ಪೋಲಿಸನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago