Categories: CinemaLatest

ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್. ಜಾನಕಿ ಅಂತ್ಯಕ್ರಿಯೆ; ಮೊಮ್ಮಗಳು ಅಪ್ಸರಾ ನೆರವೇರಿಸಲಿದ್ದಾರೆ ಅಂತಿಮ ವಿಧಿವಿಧಾನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನಡೆಯಲಿದ್ದು, ಅವರ ಮೊಮ್ಮಗಳು ಅಪ್ಸರಾ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಎಸ್. ಜಾನಕಿ ಅವರ ಪುತ್ರ ಮುರುಳಿಕೃಷ್ಣ ಅವರು ಕೆಲವು ವರ್ಷಗಳ ಹಿಂದೆಯೇ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಪುತ್ರಿ ಅಪ್ಸರಾ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

ಕಣಿಯನಹುಂಡಿ ಗ್ರಾಮದಲ್ಲಿರುವ ಜಾನಕಿ ಅವರ ಅಭಿಮಾನಿ ನವೀನ್ ಅವರ ಫಾರಂ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಂತ್ಯಕ್ರಿಯೆಯ ಕುರಿತು ಕುಟುಂಬಸ್ಥರೊಂದಿಗೆ ಚರ್ಚಿಸಿದ ಬಳಿಕ ಶನಿವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಭಾನುವಾರ ಸಂಜೆ ಹೆಚ್.ಡಿ.ಕೋಟೆ ರಸ್ತೆಯ ಕಣಿಯನಹುಂಡಿ ತೋಟದಲ್ಲಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದರು.

ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಸಂಜೆ ಕಣಿಯನಹುಂಡಿಯ ನವೀನ್ ಅವರ ಫಾರಂ ಹೌಸ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು.

ತಮ್ಮ ಅಂತ್ಯಸಂಸ್ಕಾರ ಮೈಸೂರಿನಲ್ಲಿಯೇ ನಡೆಯಬೇಕು ಎಂಬುದು ಎಸ್. ಜಾನಕಿ ಅವರ ಇಚ್ಛೆಯಾಗಿತ್ತು. ಅವರ ಆಶಯದಂತೆ ಮೈಸೂರಿನಲ್ಲೇ ಅಂತಿಮ ಸಂಸ್ಕಾರ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವಂತೆ ಸೂಚಿಸಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

ಬಾಡಿಗೆ ಮನೆಯಲ್ಲಿ ವಾಸವಿದ್ದ ಜಾನಕಿ

ಮೈಸೂರಿನ ಬೊಗಾದಿಯ ಎಸ್‌ಬಿಎಂ ಬಡಾವಣೆಯ ಬಾಡಿಗೆ ಮನೆಯಲ್ಲಿ ಎಸ್. ಜಾನಕಿ ವಾಸವಿದ್ದರು. ನವೀನ್ ಮತ್ತು ಪವನ್ ಎಂಬವರು ಅವರನ್ನು ಆರೈಕೆ ಮಾಡುತ್ತಿದ್ದರು. ವಾರದ ಹಿಂದೆ ಮಂಗಳೂರಿನಲ್ಲಿರುವ ತಮ್ಮ ಅಕ್ಕನ ಮನೆಗೆ ತೆರಳಿ ವಾಪಸಾಗಿದ್ದರು. ಈ ವೇಳೆ ಅವರೊಂದಿಗೆ ಸೊಸೆ ಉಮಾ ಹಾಗೂ ಮೊಮ್ಮಗಳು ಅಪ್ಸರಾ ಇದ್ದರು.

ಶನಿವಾರ ಬೆಳಗ್ಗೆ ಸುಮಾರು 11 ಗಂಟೆಗೆ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 7.30ರ ಸುಮಾರಿಗೆ ಅವರು ನಿಧನರಾದರು. ಕಳೆದ ಎರಡು ವರ್ಷಗಳಿಂದ ಕೀಲು ನೋವು ಹಾಗೂ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

48 ಸಾವಿರಕ್ಕೂ ಅಧಿಕ ಹಾಡುಗಳ ಸರದಾರೆ

ಎಸ್. ಜಾನಕಿ ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಕೇವಲ ಹಿನ್ನೆಲೆ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರಸಂಗೀತ ಲೋಕದ ಅಪ್ರತಿಮ ಧ್ವನಿಯಾಗಿ ಕೋಟ್ಯಂತರ ಸಂಗೀತಪ್ರೇಮಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.

ಕನ್ನಡದಲ್ಲಿ ಸಾವಿರಾರು ಸಾರ್ವಕಾಲಿಕ ಸೂಪರ್‌ಹಿಟ್ ಹಾಡುಗಳನ್ನು ಹಾಡಿರುವ ಎಸ್. ಜಾನಕಿ, ಭಾವಗೀತೆ, ಮೆಲೋಡಿ, ಶಾಸ್ತ್ರೀಯ, ಅರೆಶಾಸ್ತ್ರೀಯ, ರೊಮ್ಯಾಂಟಿಕ್ ಹಾಗೂ ಪಾಶ್ಚಾತ್ಯ ಶೈಲಿ ಸೇರಿದಂತೆ ಹಲವು ಪ್ರಕಾರದ ಹಾಡುಗಳಿಗೆ ತಮ್ಮ ವಿಶಿಷ್ಟ ಧ್ವನಿಯ ಮೂಲಕ ಜೀವ ತುಂಬಿದ್ದರು.

ಎಸ್. ಜಾನಕಿ ಅವರು ಹಾಡುವುದನ್ನು ನಿಲ್ಲಿಸಿದ್ದರೂ ಅವರ ಹಾಡುಗಳು ಸಂಗೀತಪ್ರೇಮಿಗಳ ಹೃದಯದಲ್ಲಿ ಸದಾ ಜೀವಂತವಾಗಿರಲಿವೆ. ಇನ್ನು ಮುಂದೆ ಅವರ ಧ್ವನಿ, ಹಾಡುಗಳು ಮತ್ತು ಅಪಾರ ಸಂಗೀತ ಪರಂಪರೆಯೇ ಅವರ ಅಮರ ನೆನಪಾಗಿ ಉಳಿಯಲಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago