Latest

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ ವ್ಯಾಪಾರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಎಂಬುವವರು ತಮ್ಮ ಮಾವಿನ ತೋಟಕ್ಕೆ ಭೇಟಿ ನೀಡಿದ್ದ ಸಂದರ್ಭ ಈ ಘಟನೆ ನಡೆದಿದೆ. ಅನ್ವರ್ ಅವರು ಸುಮಾರು 30 ಲಕ್ಷ ರೂಪಾಯಿ ಮೊತ್ತದ ಮಾವು ಖರೀದಿ ಮತ್ತು ಮಾರಾಟ ವ್ಯವಹಾರ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಆದರೆ ಈ ವರ್ಷ ಮಾವಿನ ಬೆಲೆಗಳು ತೀವ್ರವಾಗಿ ಕುಸಿತಗೊಂಡಿರುವ ಹಿನ್ನೆಲೆ ಆರ್ಥಿಕ ತೊಂದರೆಗೆ ಅವರು ಒಳಗಾಗಿದ್ದರು.

ಮೌಲ್ಯ ಕುಸಿತದಿಂದಾಗಿ ಅನ್ವರ್ ತಮ್ಮ ತೋಟದಲ್ಲಿ ಸಿಂಪಡಿಸಿದ ಔಷಧಗಳ ವೆಚ್ಚವನ್ನೂ ಪೂರೈಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದರು. ಇಂದು ಬೆಳಗ್ಗೆ ಅವರು ತೋಟದಲ್ಲಿ ಮಾವು ಕಟಾವು ಕೆಲಸಗಳನ್ನಾಗಿಟ್ಟಿದ್ದರು. ಇದೇ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು.

ಈ ಮಧ್ಯೆ, ಮೌಲ್ಯ ಭದ್ರತಾ ಬೆಲೆ (ಬೆಂಬಲ ಬೆಲೆ) ಕೊಡಿಸುವಂತೆ ರೈತರು ಕಳೆದ 18 ದಿನಗಳಿಂದ ಹೋರಾಟ ನಡೆಸುತ್ತಿರುವುದು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. ಅನ್ವರ್ ಅವರ ಕುಟುಂಬಸ್ಥರು ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago