Categories: CrimeLatest

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಳ್ಳಾರಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಸೆಪ್ಟೆಂಬರ್ 28, 2026ರಂದು ರಾತ್ರಿ 9.15ರ ಸುಮಾರಿಗೆ ಸಬ್‌ ರಿಜಿಸ್ಟರ್ ಕಚೇರಿಯ ದೇವಪ್ಪ ಅವರು ಠಾಣೆಗೆ ನೀಡಿದ ದೂರಿನ ಪ್ರಕಾರ, ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2ರಲ್ಲಿರುವ 6 ಎಕರೆ 87 ಸೆಂಟ್ಸ್ ಜಮೀನು ಬೆಂಗಳೂರಿನಲ್ಲಿ ವಾಸವಾಗಿರುವ ಶ್ರೀಮತಿ ಸ್ವಪ್ನ ಪಿ. ಅವರಿಗೆ ಸೇರಿದೆ ಎನ್ನಲಾಗಿದೆ.

ದೂರಿನ ಪ್ರಕಾರ, ಆರೋಪಿ ಲೋಕೇಶ್ ಎಂಬಾತ ಜಮೀನನ್ನು ವಂಚನೆಯ ಮೂಲಕ ಪಡೆದುಕೊಳ್ಳುವ ಉದ್ದೇಶದಿಂದ ನಿಜವಾದ ಮಾಲೀಕರಾದ ಸ್ವಪ್ನ ಪಿ. ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾನೆ. ಬಳಿಕ ನಕಲಿ ದಾಖಲೆಗಳನ್ನು ಮೂಲ ದಾಖಲೆಗಳೆಂದು ಬಿಂಬಿಸಿ, ಅದೇ ಹೆಸರಿನ ಮತ್ತೊಬ್ಬ ಮಹಿಳೆಯನ್ನು ನೋಂದಣಿ ಕಚೇರಿಗೆ ಕರೆತಂದು ನಿಜವಾದ ಮಾಲೀಕರಂತೆ ಪರಿಚಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ನಕಲಿ ಮಹಿಳೆಯು ನಿಜವಾದ ಮಾಲೀಕರಂತೆ ನಟಿಸಿ, ಅವರ ಹೆಸರಿನಲ್ಲಿ ನಕಲಿ ಸಹಿ ಮಾಡಿಸಿ, 2026ರ ಜೂನ್ 9ರಂದು ₹1,08,50,000ಕ್ಕೆ ಜಮೀನಿನ ಮಾರಾಟದ ಕರಾರು (Sale Deed) ನೋಂದಣಿ ಮಾಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಪ್ರಕರಣದಲ್ಲಿ ಗುಂಡೆ ಹುಸೇನ್ ಪೀರ್ ಹಾಗೂ ವಿ. ಹನುಮಂತಪ್ಪ ಅವರು ನಿಜವಾದ ಜಮೀನು ಮಾಲೀಕರನ್ನು ತಿಳಿದಿದ್ದರೂ, ನೋಂದಣಿ ಕಚೇರಿಗೆ ಹಾಜರಾದ ನಕಲಿ ಮಹಿಳೆಯನ್ನೇ ಮೂಲ ಮಾಲೀಕರೆಂದು ಗುರುತಿಸಿ, ವಿಕ್ರಯ ದಸ್ತಾವೇಜಿಗೆ ಸಾಕ್ಷಿದಾರರಾಗಿ ಸಹಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂಲಕ ನಿಜವಾದ ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸುವುದು, ನಕಲಿ ಸಹಿ ಮಾಡುವುದು, ನಕಲಿ ವ್ಯಕ್ತಿಯನ್ನು ಮೂಲ ಮಾಲೀಕರಂತೆ ಬಿಂಬಿಸಿ ಜಮೀನು ಮಾರಾಟ ಮಾಡುವುದು ಸೇರಿದಂತೆ ವಂಚನೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮತಿ ಸ್ವಪ್ನ ಪಿ., ಲೋಕೇಶ್, ಗುಂಡೆ ಹುಸೇನ್ ಪೀರ್ ಹಾಗೂ ವಿ. ಹನುಮಂತಪ್ಪ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸಬೇಕಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

35 minutes ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

6 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

6 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

1 day ago

ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಗುಡ್‌ನ್ಯೂಸ್: ಇನ್ಮುಂದೆ 30 ದಿನಗಳ ರೀಚಾರ್ಜ್, ವರ್ಷಕ್ಕೆ 12 ಬಾರಿ ಸಾಕು!

ನವದೆಹಲಿ: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಜಾರಿಗೆ ತಂದಿದೆ. ಟೆಲಿಕಾಂ ಕನ್ಸ್ಯೂಮರ್ ಪ್ರೊಟೆಕ್ಷನ್ (ಥರ್ಟೀನ್ತ್ ಅಮೆಂಡ್‌ಮೆಂಟ್)…

2 days ago