ಬೆಳಗಾವಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ತಾನೇ ಆಸ್ತಿಯ ಮೂಲ ಮಾಲೀಕ ಎಂದು ಬಿಂಬಿಸಿ, ಮತ್ತೊಬ್ಬರ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ 62 ವರ್ಷದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪೀರಣವಾಡಿ ನಿವಾಸಿ ಲಕ್ಷಣ ದೇಸಾಯಿ (62) ಎಂದು ಗುರುತಿಸಲಾಗಿದೆ. 2025ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ವೇಳೆ, ಆರೋಪಿ ನಕಲಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ದೂರುದಾರರಿಗೆ ವಂಚನೆ ಎಸಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…