Categories: CorruptionCrimeLatest

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಹಾಗೂ ನಾಗರಾಳ ಟೋಲ್‌ ಸಮೀಪದಿಂದ ಇಳಕಲ್ ಮಾರ್ಗವಾಗಿ ವಿಜಯಪುರದ ಕಡೆಗೆ ಪ್ರತಿದಿನ ರಾತ್ರಿ 11 ಗಂಟೆಯ ನಂತರ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಗತ್ಯ ಪರವಾನಗಿ ಪಡೆಯದೆ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಮಾರ್ಗದಲ್ಲಿ KA 28 AB 0164 ನೋಂದಣಿ ಸಂಖ್ಯೆಯ, ‘Ravana’ ಎಂದು ಬರೆದಿರುವ ಭಾರತ್ ಬೆಂಜ್ ಟಿಪ್ಪರ್ ಸೇರಿದಂತೆ ಹಲವು ವಾಹನಗಳು ಮರಳು ಸಾಗಾಟದಲ್ಲಿ ತೊಡಗಿರುವುದು ಕಂಡುಬಂದಿದೆ ಎನ್ನಲಾಗಿದೆ. ಕೆಲವು ಟಿಪ್ಪರ್‌ಗಳಿಗೆ ನಂಬರ್ ಪ್ಲೇಟ್‌ಗಳೇ ಇಲ್ಲದಿರುವುದು, ಮತ್ತಿತರ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಅಳಿಸಿರುವುದು ಅಥವಾ ಕೆಸರಿನಿಂದ ಮುಚ್ಚಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಲಾಗಿದೆ.

ಸರ್ಕಾರದ ನಿಯಮಗಳ ಪ್ರಕಾರ ಮರಳು ಸಾಗಿಸುವ ವಾಹನಗಳು ನಿಗದಿತ ನಿಯಮಗಳನ್ನು ಪಾಲಿಸಬೇಕು. ಮರಳು ಸಾಗಿಸುವಾಗ ಧೂಳು ಹಾಗೂ ಮರಳು ಹಾರಿ ಹೋಗದಂತೆ ದಪ್ಪ ತಾರ್ಪಾಲಿನಿಂದ ವಾಹನವನ್ನು ಸಂಪೂರ್ಣವಾಗಿ ಮುಚ್ಚುವುದು ಕಡ್ಡಾಯವಾಗಿದೆ. ಆದರೆ, ಇಲ್ಲಿ ನಿಯಮಗಳನ್ನು ಪಾಲಿಸದೆ ಮರಳು ಸಾಗಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದರೊಂದಿಗೆ, ರಾತ್ರಿ ವೇಳೆಯಲ್ಲಿ ನಡೆಯುತ್ತಿರುವ ಈ ಮರಳು ಸಾಗಾಟದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಇತ್ತೀಚೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳು ಸಾಗಾಟದ ವಿರುದ್ಧ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮರಳು ಸಾಗಾಟ ಮಾಡುತ್ತಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆಯೇ ಅಥವಾ ಅಕ್ರಮ ಮರಳು ದಂಧೆ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

35 minutes ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

4 days ago