Latest

ಗ್ರಾಮ ಲೆಕ್ಕಾಧಿಕಾರಿಗಳ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆಬ್ರವರಿ 10ರಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಈ ಮುಂಚಿನ ಮುಷ್ಕರದಿಂದಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಸ್ಯೆ ಬಗೆಹರಿಯದ ಕಾರಣ, ರಾಜ್ಯಮಟ್ಟದಲ್ಲಿ ಎರಡನೇ ಹಂತದ ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಗ್ರಾಮ ಲೆಕ್ಕಾಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಬೇಡಿಕೆಗಳು:

*ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದು.

*ತಾಂತ್ರಿಕ ಹುದ್ದೆಗಳಿಗೆ ನಿಗದಿಯಿರುವ ವೇತನ ಶ್ರೇಣಿಯನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೂ ಅನ್ವಯಿಸುವಂತೆ ಆದೇಶ ಹೊರಡಿಸುವುದು.

*ಸೇವಾ ನಿಯಮಗಳ ಸುಧಾರಣೆ ಮತ್ತು ಸೌಲಭ್ಯ ವೃದ್ಧಿ.

*ಅಂತರ್ಜಿಲ್ಲಾ ವರ್ಗಾವಣೆಯನ್ನು ಮರುಸ್ಥಾಪಿಸುವುದು ಅಥವಾ ಕಂದಾಯ ಇಲಾಖೆಗೆ ವಿಶೇಷ ವರ್ಗಾವಣೆ ಮಾರ್ಗಸೂಚಿ ರೂಪಿಸುವುದು.

*ಅನುಕಂಪದ ನೇಮಕಾತಿಗೆ ತಿದ್ದುಪಡಿ ಮಾಡುವುದು.

*ಕರ್ತವ್ಯ ನಿರ್ವಹಣೆ ವೇಳೆ ಜೀವಹಾನಿ ಸಂಭವಿಸಿದರೆ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವ ವ್ಯವಸ್ಥೆ ಮಾಡುವುದು.

ಗ್ರಾಮ ಲೆಕ್ಕಾಧಿಕಾರಿಗಳ ಪ್ರಕಾರ, ಸರ್ಕಾರ ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಸೌಲಭ್ಯ ಒದಗಿಸುತ್ತದೆ, ಆದರೆ ಹೆಚ್ಚಿನ ಕೆಲಸದ ಹೊರೆ ಹೊತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರಿಸುತ್ತೇವೆ ಎಂದು ಹುಕ್ಕೇರಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವರದಿ: ಅರುಣ್ ಕುಮಾರ್

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago